Karnataka Rain: ಮುಂದಿನ 2 ದಿನ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ ಸಾಧ್ಯತೆ!

ಈ ಬಾರಿಯ ಮುಂಗಾರು ಪೂರ್ವ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದಿದ್ದರೂ, ಕಳೆದ ಎರಡು ದಿನಗಳಿಂದ ರಾಜ್ಯದ ಹಲವು ಕಡೆ ಧಾರಾಕಾರ ಮಳೆ ಸುರಿದಿದೆ. ಇದೀಗ ಮುಂದಿನ 2 ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಜನ ಬಿಸಿಲಿನ ಬೇಗೆಗೆ ಬಳಲಿ ಬೆಂಡಾಗಿದ್ದಾರೆ. ಪ್ರತಿ ವರ್ಷ ಈ ದಿನಗಳಲ್ಲಿ ಮುಂಗಾರು ಪೂರ್ವ ಗುಡುಗು ಸಹಿತ ಅಬ್ಬರದ ಮಳೆ ಸುರಿಯುತ್ತಿತ್ತು. ಆದರೆ ಈಗ ಆಕಾಶ ತಿಳಿ ನೀಲಿಯಾಗಿದ್ದು, ಜನರು ವರ್ಷಧಾರೆಯ ನಿರೀಕ್ಷೆಯಲ್ಲಿದ್ದಾರೆ.

Karnataka Rain: Heavy Rain Is Likely In These Districts Including Bengaluru For The Next 2 Days

ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ

ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದರೂ ಮಳೆ ಬಿದ್ದಿರಲಿಲ್ಲ. ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ದಕ್ಷಿಣ ಒಳನಾಡಿನತ್ತ ಗಾಳಿ ಬೀಸುತ್ತಿದ್ದು, ಹೀಗಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಬೆಂಗಳೂರು, ರಾಮನಗರ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನ

ಕಳೆದ ರಾತ್ರಿ ಬೆಂಗಳೂರಿನಲ್ಲಿ ಅಲ್ಪ ಪ್ರಮಾಣದ ಮಳೆಯಾದ ಕಾರಣ, ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಧ್ಯ ಕರ್ನಾಟಕದ ಹಾವೇರಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

Karnataka Rain: Heavy Rain Is Likely In These Districts Including Bengaluru For The Next 2 Days

ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕಕ್ಕೇರಿಯಲ್ಲಿ 7 ಸೆಂ.ಮೀ ಮಳೆ

ಯಾದಗಿರಿ ಜಿಲ್ಲೆಯ ಕಕ್ಕೇರಿಯಲ್ಲಿ 7 ಸೆಂ.ಮೀ ಮಳೆಯಾಗಿದ್ದು, ಬಾಗಲಕೋಟೆ, ಇಳಕಲ್, ಬಾದಾಮಿ, ಸುರಪುರ, ಹೊಸದುರ್ಗ, ನಾರಾಯಣಪುರ, ಕುಡತಿನಿ, ಸುಳ್ಯ, ಭಾಗಮಂಡಲ, ಮಸ್ಕಿ, ಮಾನ್ವಿ, ಬೀಳಗಿ, ಗಂಗಾವತಿ, ಯಲಬುರ್ಗಾ, ಅರಕಲಗೂಡು ತಾಲ್ಲೂಕುಗಳಲ್ಲಿ ವರುಣ ತಂಪೆರೆದಿದ್ದಾನೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 37.1 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡಕವಿದ ವಾತಾವರಣವಿರಲಿದ್ದು, ಬೆಳಗ್ಗೆ ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶವಿದ್ದರೆ, ಕನಿಷ್ಠ ಉಷ್ಣಾಂಶ 21.0 ಡಿಗ್ರಿ ಸೆಲ್ಸಿಯಸ್​ ಇರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+