Karnataka Rain: ಇನ್ನೊಂದೇ ಗಂಟೆ ಬಾಕಿ.. ಈ ಜಿಲ್ಲೆಗಳಿಗೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ?
Karnatak Rain: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಹಾಗೆಯೇ ಇಂದು (ಮೇ 19) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಹಾಗೂ ಮೇ 26ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 19) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನದ ವೇಳೆಗೆ ನಗರದ ಹಲವೆಡೆ ಗುಡುಗು ಸಮೇತ ಮಳೆ ಶುರುವಾಗಿದೆ. ಇನ್ನು ಮೂರು ಗಂಟೆಗಳಲ್ಲಿ ಖಂಡಿಯವಾಗಿಯೂ ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಗುಲ್ಬರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳ ಹಲವೆಡೆ ಗುಡುಗು, ಸಿಡಿಲು ಸಹಿತ ಧಾರಾಕಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಇನ್ನು ದಕ್ಷಿಣ ಕನ್ನದ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮೇ 26ರವರೆಗೂ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications