Karnataka Rain: ಬೆಂಗಳೂರು-ತುಮಕೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಭಾನುವಾರ ಕೂಡ ವ್ಯಾಪಕ ಮಳೆ

ಸೆಪ್ಟೆಂಬರ್ ಕೊನೆಯ ವಾರದಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಶನಿವಾರ ರಾತ್ರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾನುವಾರ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಶನಿವಾರ ರಾತ್ರಿ ರಾಜ್ಯದ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ರಾಯಚೂರು ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಮಳೆಯಾಗುತ್ತಿರುವುದು ಈ ಭಾಗದ ಜನರಲ್ಲಿ ಸಂತಸ ಮೂಡಿಸಿದೆ.

karnataka-rain-heavy-rain-thunderstorm

ತುಮಕೂರು ಜಿಲ್ಲೆಯ ಮಧುಗಿರಿ, ಶಿರಾ, ಕೊರಟಗೆರೆ ತಾಲೂಕಿನ ಹಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿದೆ. ದಾಬಸ್‌ಪೇಟೆ, ಗೌರಿಬಿದನೂರು ಭಾಗಗಳಲ್ಲಿ ಕೂಡ ಉತ್ತಮ ಮಳೆಯಾಗಿದೆ.

ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ

ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಿದೆ. ಮಾನ್ವಿ, ಸಿರವಾರ, ಕೌತಾಲ್, ಕೆಂಭಾವಿ, ಹುಣಸಗಿ, ಲಿಂಗಸುಗೂರು, ಮುದಗಲ್, ಕೊಡೆಕಲ್, ತಾಳಿಕೋಟಿ, ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳಲ್ಲಿ ಕೂಡ ಭಾರಿ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಸುರತ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗಿದೆ. ಮೈಸೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು ರೈತರಲ್ಲಿ ಸಂತಸ ಮೂಡಿಸಿದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆ

ಬೆಂಗಳೂರಿನ ನಾಗರಭಾವಿ, ಚಂದ್ರಾ ಲೇಔಟ್, ವಿಜಯನಗರ, ನಾಯಂಡಹಳ್ಳಿ, ಆರ್.ಆರ್.ನಗರ, ಉತ್ತರಹಳ್ಳಿ, ಕುಮಾರಸ್ವಾಮಿ ಲೇಔಟ್, ಜಯನಗರ, ಜೆ.ಪಿ.ನಗರ, ಮಲ್ಲೇಶ್ವರ, ಬ್ರಿಗೇಡ್ ರಸ್ತೆ, ಮೆಜೆಸ್ಟಿಕ್, ಶೇಷಾದ್ರಿಪುರ, ಬನಶಂಕರಿ ಸೇರಿದಂತೆ ಹಲವು ಭಾಗಗಳಲ್ಲಿ ಶನಿವಾರ ರಾತ್ರಿ ತುಂತುರು ಮಳೆಯಾಗಿದೆ. ಹೆಚ್ಚು ಮೋಡಗಳಿದ್ದ ಕಾರಣ ನಗರದಲ್ಲಿ ಸೆಕೆಯ ವಾತಾವರಣ ಇತ್ತು.

ಭಾನುವಾರ ಕೂಡ ರಾಜ್ಯದ ಹಲವೆಡೆ ಭಾರಿ ಮಳೆ

ಭಾನುವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಮೂರು ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ವಿಜಯಪುರ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+