Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಸುರಿಯಲಿದೆ ಧಾರಾಕಾರ ಮಳೆ- ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಳೆ ಬಿಟ್ಟೂ ಬಿಡದೆ ಸುರಿಯುತ್ತಿರುವ ಹಿನ್ನೆಲೆ ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರುನಾಡಿನಲ್ಲಿ ವರುಣನ ಆರ್ಭಟ ತೀವ್ರವಾಗುತ್ತಿದೆ, ಒಂದೆಡೆ ಆರು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ 2 ದಿನಗಳಿಂದ ಭಾರಿ ಗಾಳಿ ಸಹಿತ ಮಳೆಯಾಗುತ್ತಿದ್ದು, ಇಂದು ಸಹ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ನಿರಂತರವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

Karnataka Rain Heavy rain will occur in 16 districts of Karnataka

ಇನ್ನೂ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರದಿಂದಾಗಿ ಹಲವೆಡೆ ಭೂಕುಸಿತವಾಗುತ್ತಿದ್ದು, ಮನೆಗಳ ಗೋಡೆಗಳು ಸಹ ಕುಸಿದಿವೆ, ಅಲ್ಲದೇ ಮಳೆ ಬಿಟ್ಟೂ ಬಿಡದೆ ಸುರಿಯುತ್ತಿದ್ದು, 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದು (ಜುಲೈ 16) ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಕೊಡಗಿಗೆ ಆರೆಂಜ್ ಅಲರ್ಟ್​ ಇದ್ದು, ಮೈಸೂರು, ಹಾಸನ, ಬಳ್ಳಾರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡದ ಸಂತೆಗುಳಿಯಲ್ಲಿ ಅಘನಾಶಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇತ್ತ ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಮಳೆಯಾಗಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಇಂದು ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರೆಡ್ಅಲರ್ಟ್ ನೀಡಲಾಗಿದೆ ಹಾಗೂ ಜುಲೈ 17 ರಿಂದ 20 ರವರೆಗೆ ಕರಾವಳಿ ಜಿಲ್ಲೆಗಳಿಗೆ ಮತ್ತು ಜುಲೈ 17 & 18 ರಂದು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಕೆ ತಿಳಿಸಿದೆ. ಜುಲೈ 19 & 20 ರಂದು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 16 ರಿಂದ 18 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ಹಲಿಯಾಳ ಮತ್ತು ಮುಂಡಗೊಂಡ ತಾಲೂಕು ಹೊರತುಪಡಿಸಿ ಇನ್ನುಳಿದ 10 ತಾಲೂಕುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡಮುಸುಕಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+