Karnataka Rains: ಮುಂದುರೆದ ವರುಣನ ಆರ್ಭಟ; ಕರ್ನಾಟಕದ ಈ 20 ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಸೆಪ್ಟೆಂಬರ್‌ 23: ಕರ್ನಾಟಕದಾದ್ಯಂತ ಮುಂಗಾರು ಮಳೆ ಆರ್ಭಟ ತಗ್ಗಿತು ಎನ್ನುವಷ್ಟರಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮತ್ತೆ ವರುಣನ ಅಬ್ಬರ ಜೋರಾಗಿ ಸದ್ದು ಮಾಡುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಮಳೆ ಅಬ್ಬರ ಜೋರಾಗಿದ್ದು, ಹಲವು ಜಲಾಶಯಗಳು ಸಂಪೂರ್ಣ ಭರ್ತಿಯಾಗಿದೆ.

ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain Heavy rain will occur in 20 districts of Karnataka

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಭಾನುವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇತ್ತ ವಿಜಯನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ. ಮಿಡಿಗೇಶಿ, ಭಾಲ್ಕಿ, ಔರಾದ್, ಗಂಗಾವತಿ, ತೊಂಡೇಭಾವಿ, ಗದಗ, ಸೇಡಬಾಳ, ಗೌರಿಬಿದನೂರು, ಹಳಿಯಾಳ, ಮಂಠಾಳ, ಹುಮನಾಬಾದ್, ಅಣ್ಣಿಗೆರೆ, ಬೀದರ್, ಜೇವರ್ಗಿ, ಚಿತ್ರದುರ್ಗ, ಸುಳ್ಯ, ಕಲಬುರಗಿ, ವಿಜಯಪುರ, ಕುರ್ಡಿ, ನೆಲೋಗಿ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.

ಇನ್ನು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮುಂದಿನ 48 ಗಂಟೆಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ವಿಜಯಪುರ, ಕಲಬುರ್ಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಂಭವವಿದೆ. ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಮತ್ತು ಕೋಲಾರ, ತುಮಕೂರು ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಮಲೆನಾಡು & ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಅಲ್ಲದೇ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 1 ರವರೆಗೆ ಕಾವೇರಿ ಜಲಾನಯನ ಪ್ರದೇಶದ ಮಳೆಯಾಗುವ ಸಾಧ್ಯತೆಯಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+