Heavy Rain: ಕರ್ನಾಟಕದ ಹಲವೆಡೆ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಮುಂದುವರೆಯಲಿದೆ ಮಳೆ- ಇಲ್ಲಿದೆ ಮಾಹಿತಿ

ಬೆಂಗಳೂರು, ಅಕ್ಟೋಬರ್‌ 16: ಕರ್ನಾಟಕದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಳಾಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ.ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rain Heavy rain will occur in many districts of Karnataka including Bengaluru

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಕಲಬುರಗಿ, ಬೀದರ್​, ಬಾಗಲಕೋಟೆಯಲ್ಲಿ ಮಳೆಯಾಗಲಿದೆ. ಪಣಂಬೂರು, ಚಿಕ್ಕೋಡಿ, ಬೇಗೂರು, ರಾಯಲ್ಪಾಡು, ಗೌರಿಬಿದನೂರು, ತೊಂಡೇಭಾವಿ, ದಕ್ಷಿಣ ಕನ್ನಡ, ಸುಳ್ಯ, ಸೇಡಬಾಳ, ಚಿಕ್ಕಬಳ್ಳಾಪುರ, ಸಿರಾ, ನಾಪೋಕ್ಲು, ರಾಮನಗರದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಮಾಗಡಿ, ಬೆಂಗಳೂರು ನಗರ, ಗುಬ್ಬಿ, ಸರಗೂರು, ಮಾಣಿ, ಹೊನ್ನಾವರ, ಬೆಳ್ತಂಗಡಿ, ರಬಕವಿ, ಧರ್ಮಸ್ಥಳ, ಕಾರ್ಕಳ, ನಿಪ್ಪಾಣಿ, ಮಧುಗಿರಿ, ಎಚ್​ಡಿ ಕೋಟೆ, ಹೊಸದುರ್ಗ, ಭಾಗಮಂಡಲ, ಚಿತ್ರದುರ್ಗ, ಪರಶುರಾಂಪುರ, ಚನ್ನಪಟ್ಟಣ, ತಿಪಟೂರಿನಲ್ಲಿ ಮಳೆಯಾಗಿದೆ.

ಅಕ್ಟೋಬರ್ 16 ರಿಂದ ಅಕ್ಟೋಬರ್ 24 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 22 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 23 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿಲಿ ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಹೆಚ್ಚುಮಳೆಯಾಗುವ ಸಾಧ್ಯತೆಯಿದೆ. ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಗುಡುಗು ಮಿಂಚು ಮತ್ತು ಜೋರಾದ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಅಸ್ತಿತ್ವದಲ್ಲಿರುವ ವಾಯುಭಾರ ಕುಸಿತದಿಂದಾಗಿ, ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಕೆಲವು ಭಾಗಗಳಲ್ಲಿಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+