Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 6 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

Karnataka Rain: ಮೇ ತಿಂಗಳ ಆರಂಭದಿಂದ ಇಲ್ಲಿಯವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಅದರಲ್ಲೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅನಾಹುತಗಳೇ ಸಂಭವಿಸಿದ ಘಟನೆಗಳು ಕೂಡ ನಡೆದಿವೆ. ಹಾಗೆಯೇ ಮುಂದಿನ 6 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದ್ದು, ತಾಪಮಾನದ ಪ್ರಮಾಣ ಕಡಿಮೆಯಾಗುವ ಸಾಧ್ಯೆತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಬೆಳಗ್ಗೆ ಇಲ್ಲ ಸಂಜೆ ವೇಳಗೆ ಮಳೆಯಾಗುತ್ತಲೇ ಇದ್ದು, ಈ ಹಿನ್ನೆಲೆ ಈಗಾಗಲೇ ನಗರದ ಹಲವೆಡೆ ಬೃಹತ್‌ ಮರಗಳು ರಸ್ತೆಗುರುಳಿ ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ. ಇನ್ನು ಇಂದು (ಮೇ 17) ಬೆಳ್ಳಂಬೆಳ್ಳಗೆಯೇ ನಗರದಲ್ಲಿ ಮಳೆರಾಯ ತನ್ನ ಆರ್ಭಟವನ್ನು ಶುರು ಮಾಡಿದ್ದ. ಇದೀಗ ಮತ್ತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಮತ್ತೆ ಆರ್ಭಟಿಸಲಿದ್ದಾನೆ ಎನ್ನುವ ಮುನ್ಸೂಚನೆ ಇದೆ.

Karnataka Rain Heavy rain with thunderstorm forecast for the next 6 days in these districts

ಅದರಲ್ಲೂ ಮತ್ತೊಂದೆಡೆ ಹವಾಮಾನ ಇಲಾಖೆ, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮೇ 23ರವರರಗೂ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಧಾರಾಕಾರ, ಎಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಇಂದು (ಮೇ 17) ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧರಣ ಮಳೆ ಬೀಳಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.

ಮೇ 18ರಂದು ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮೇ 19ರಂದು ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಅಬ್ಬರದ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಮೇ 20ರಂದು ಕೊಡಗು, ಹಾಸನ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಮೈಸೂರು, ವಿಜಯನಗರ, ಜಿಲ್ಲೆಯ ಹಲವೆಡೆ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಮೇ 21ರಂದು ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಉಡುಪಿ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬಳ್ಳಾರಿ, ತುಮಕೂರು, ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ವಿಜಯನಗರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮೇ 22 ಮತ್ತು 23ರಂದು ಕರಾವಳಿ ಮತ್ತು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿದ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಆದರೆ ಈ ವೇಳೆ ಮೀನುಗಾರರಿಗೆ ಯಾವುದೇ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+