Karnataka Weather: ಮುಂದಿನ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟದ ಮುನ್ಸೂಚನೆ
Karnataka Weather: ಮೊನ್ನೆಯಷ್ಟೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರಿಸಿದ ಮಳೆರಾಯ ನಿನ್ನೆ (ಏಪ್ರಿಲ್ 21) ಇದ್ದಕಿದ್ದಂತೆ ಮಾಯವಾಗಿದ್ದು, ಮತ್ತೆ ಆಡಿದ್ದೇ ಆಟ ಎನ್ನುವಂತೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಇನ್ನು ಮುಂದಿನ ಎರಡು ದಿನಗಳ ಕಾಲ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿಯಲ್ಲಿ ನಿನ್ನೆ (ಏಪ್ರಿಲ್ 21) ಬೆಳಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಬಳಿಕ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣಾಗಿದೆ. ಇನ್ನು ಇಂದು (ಏಪ್ರಿಲ್ 22) ಕೂಡ ಬೆಳಗ್ಗೆಯಿಂದಲೂ ನಗರದಲ್ಲಿ ಅದೇ ಬಿಸಿಲಿನ ವಾತಾವರಣ ಮುಂದುವರೆದಿದೆ. ಸಂಜೆ ವೇಳಗೆ ಇಲ್ಲಿ ಹಲವಡೆ ಮಳೆಯಾಗುವ ನಿರೀಕ್ಷೆಯಿದೆ ಎನ್ನುವ ಮುನ್ಸೂಚನೆ ಇದೆ.

ಸೋಮವಾರ (ಏಪ್ರಿಲ್ 22) ಕಲಬುರಗಿ, ಬೀದರ್, ಮೈಸೂರು, ದಕ್ಷಿಣ ಕನ್ನಡ, , ರಾಯಚೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಬೆಂಗಳೂರು ನಗರದ ಸುತ್ತಮುತ್ತ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಏಪ್ರಿಲ್ 23ರಂದು ಕರಾವಳಿ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆ ಒಂದೆರಡು ಕಡೆ ಮಳೆಯಾಗುವ ಸಾಧ್ಯೆತೆಯಿದೆ. ಇನ್ನು ಉಡುಪಿ ಮತ್ತು ಉತ್ತರ ಕನ್ನಡಗಳಲ್ಲಿ ಅದೇ ಒಣಹವೆ ಮುಂದುವರೆಯಲಿದೆ.
ಉತ್ತರ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?: ಇನ್ನುಳಿದಂತೆ ಏಪ್ರಿಲ್ 27ರ ನಡುವೆ ಉತ್ತರ ಒಳನಾಡಿನ ಬಾಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಈ ಭಾಗಗಳಲ್ಲಿ ತಾಪಮಾನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?: ಮತ್ತೊಂದೆಡೆ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಪ್ರತ್ಯೇಕ ಕಡೆ ಗುಡುಗು, ಮಿಂಉ ಸಹಿತ ಮಳೆ ಬೀಳುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯುವ ಮುನ್ಸುಚನೆಯನ್ನು ನೀಡಿದೆ.
ಬೆಂಗಳೂರು ತಾಪಮಾನದ ವಿವಿರ: ಇನ್ನು ಇಂದು (ಏಪ್ರಿಲ್ 22) ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನವು 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ನಿನ್ನೆ (ಏಪ್ರಿಲ್ 21) ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಕನಿಷ್ಠ ತಾಪಾಮಾನ 24.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications