ಮೇ ತಿಂಗಳ ಅಂತ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗುವ ಮುನ್ಸೂಚನೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕ, ಮೇ, 29: ರಾಜ್ಯದ ಹಲವೆಡೆ ಈಗಾಗಲೇ ಮುಂಗಾರು ಪೂರ್ವ ಮಳೆ ಆರ್ಭಟಿಸಿದ್ದು, ಇದರಿಂದ ದೊಡ್ಡ ಅನಾಹುತಗಳೇ ಸಂಭವಿಸಿವೆ. ಹಾಗೆಯೆ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ ತಿಂಗಳ ಅಂತ್ಯದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇನ್ನು ಕೆಲವೇ ದಿನಗಳಲ್ಲಿ ಅಂದೇ ಜೂನ್‌ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಡಲಿದ್ದು, ಇದರಿಂದ ಅನಾಹುತಗಳು ಆಗಬಾರದೆಂದು ಈಗಾಗಲೇ ರಾಜ್ಯದ ಆಯಾ ಜಿಲ್ಲಾವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೂಡ ಕೈಗೊಳ್ಳಾಗಿದೆ. ಹಾಗೆಯೇ ಮೇ ತಿಂಗಳ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಅದರಲ್ಲೂ ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Heavy Rainfall Forecast at end of May, yellow alert announced for 10 districts

ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶ ಆಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ತಿಳಿಸಿದೆ. ಅದಕ್ಕೂ ಮುನ್ನ ರಾಜ್ಯದಲ್ಲಿ ಮಂಗಳವಾರದಿಂದ (ಮೇ 30) ಮಳೆಯ ಆರ್ಭಟ ಹೆಚ್ಚಾಗಲಿದೆ. ಇನ್ನು ಮೇ 31 ಮತ್ತು ಜೂನ್ 1ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅರ್ಭಟ ಹೆಚ್ಚುವ ಸಾಧ್ಯೆತೆಯಿದೆ ಎಂದು ತಿಳಿಸಿದೆ.

ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಮೇ 31 ಮತ್ತು ಜೂನ್ 1ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಬೆಂಗಳೂರಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಸಿಲಿಕಾನ್‌ ಸಿಟಿಯಲ್ಲಿ ಕಳೆದ ನಾಲ್ಕು ದಿನಗಳ ಕಾಲ ಮಳೆರಾಯ ಬಿಡುವು ನೀಡಿದ್ದು, ಮತ್ತೇ ನಗರದಲ್ಲಿ ನಾಳೆಯಿಂದ ಆರ್ಭಟ ಶುರು ಮಾಡಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ. ಆದ್ದರಿಂದ ಬೆಂಗಳೂರಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೇಶದ ಹಲವೆಡೆ ಮೇ 31ರವರೆಗೆ ಮಳೆ

ಮತ್ತೊಂದೆಡೆ ಮುಂದಿನ ಕೆಲವು ದಿನಗಳಲ್ಲಿ ವಾಯುವ್ಯ ಪ್ರದೇಶ ಸೇರಿದಂತೆ ದೇಶದ ಹಲವಾರು ಭಾಗಗಳಲ್ಲಿ ಹೆಚ್ಚು ಮಳೆ ಬೀಳುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮೇ 28ರಂದು ಮಾಹಿತಿ ನೀಡಿತ್ತು. ಹವಾಮಾನ ಇಲಾಖೆಯ ಪ್ರಕಾರ, ಮೇ 31ರವರೆಗೆ ವಾಯುವ್ಯ ಭಾರತದಲ್ಲಿ ಗುಡುಗು, ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.

ಮೇ 30ರಿಂದ 31ರ ಅವಧಿಯಲ್ಲಿ ವಾಯುವ್ಯ ಭಾರತದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಸೋಮವಾರ (ಮೇ 29) ಮತ್ತು ಮಂಗಳವಾರ (ಮೇ 30)ರಂದು ಗರಿಷ್ಠ ಚಟುವಟಿಕೆ ನಂತರ ಮಳೆರಾಯನ ಆರ್ಭಟ ಕಡಿಮೆ ಆಗಲಿದೆ ಎಂದು ತಿಳಿಸಿದೆ.

ಮೇ 29, 30ರ ಅವಧಿಯಲ್ಲಿ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ ಸುರಿಯುವ ಸಾಧ್ಯತೆ ಇದೆ. ಮತ್ತು ಜಮ್ಮು ವಿಭಾಗ, ಹಿಮಾಚಲ ಪ್ರದೇಶ ಉತ್ತರಾಖಂಡ ಇಂದು ಮಳೆ ಮುಂದುವರೆಯಲಿದೆ. ಇನ್ನು ಪಶ್ಚಿಮ ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಗಂಟೆಗೆ 50ರಿಂದ 60 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಇನ್ನು ಇಂದು, ನಾಳೆ ರಾಜಸ್ಥಾನ ಮತ್ತು ಮೇ 29ರಂದು ಹರಿಯಾಣ, ದೆಹಲಿ, ಉತ್ತರಾಖಂಡ್‌ನಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ.

ಈಗಾಗಲೇ ಪೂರ್ವ ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ರಾಜ್ಯದ ಪಶ್ಚಿಮ ಭಾಗಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಆಗಿದೆ ಎಂದು ತಿಳಿಸಿದೆ. ಗಂಟೆಗೆ 50-60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿರುವ ಹಿನ್ನೆಲೆ ಜೈಪುರ, ಬಿಕನೇರ್, ಜೋಧಪುರ, ಅಜ್ಮೀರ್ ಮತ್ತು ಭರತ್ಪುರ ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ (ಮೇ 29) ಆರೆಂಜ್ ಆಲರ್ಟ್ ಘೋಷಣೆ ಮಾಡಲಾಗಿದೆ.

ಹಾಗೆಯೇ ಮುಂದಿನ 4 ದಿನಗಳಲ್ಲಿ ಕೇರಳ, ಲಕ್ಷದ್ವೀಪ ಮತ್ತು ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಇನ್ನು ಇಂದಿನಿಂದ ಜೂನ್ 01ರಂದು ತಮಿಳುನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆ ಆಗಲಿದೆ. ಮತ್ತೊಂದೆಡೆ ಮೇ 31 ಮತ್ತು ಜೂನ್ 01 ರಂದು ಎರಡು ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+