Karnataka rain: ಇನ್ನೂ ಕೆಲವೇ ಗಂಟೆಗಳಲ್ಲಿ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ, ಸೆಪ್ಟೆಂಬರ್‌, 07: ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರ ಮಳೆಯಾಗಿತ್ತು. ಆದರೆ ಆಗಸ್ಟ್‌ ತಿಂಗಳು ಪೂರ್ತಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಬರೀ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಇದೀಗ ಸೆಪ್ಟೆಂಬರ್‌ ತಿಂಗಳ ಆರಂಭದಿಂದಲೇ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆರಾಯ ಕೃಪೆ ತೋರಿದ್ದಾನೆ. ಹಾಗೆಯೇ ಇಂದು ರಾತ್ರಿಯೂ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಯಾವೆಲ್ಲ ಭಾಗಗಳಲ್ಲಿ ಮಳೆ ಬೀಳಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.

ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ಬೆಳಗ್ಗೆಯಿಂದಲೂ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣ ಮುಂದುವರೆದಿತ್ತು. ನಂತರ ಮೋಡ ಕವಿದ ವಾತಾವಾರಣ ನಿರ್ಮಾಣವಾಗಿ ಸಂಜೆ ಆಗುತ್ತಿದ್ದಂತೆ ನಗರದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಭಾರೀ ಮಳೆ ಸುರಿದ ಕಾರಣ ರಸ್ತೆಗಳೆಲ್ಲ ಚರಂಡಿಯಂತಾಗಿ ವಾಹನ ಸವಾರರು ಟ್ರಾಫಿಕ್ ಜಾಮ್‌ನಿಂದ ಪರದಾಡಿದ ಘಟನಯೂ ನಡೆದಿದೆ.

karnataka-rain

ಬೆಂಗಳೂರಿನಲ್ಲಿ ಭಾರೀ ಮಳೆ

ಮೆಜೆಸ್ಟಿಕ್‌, ಶೇಷಾದ್ರಿಪುರಂ, ಚಾಮರಾಜಪೇಟೆ, ಗಾಂಧಿಬಜಾರ್, ಮಲ್ಲೇಶ್ವರಂ, ಜಯನಗರ, ಕೆ.ಆರ್.ಮಾರುಕಟ್ಟೆ, ಜಯನಗರ, ವಿಧಾನಸೌಧ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ತಗ್ಗು ಪ್ರದೇಶಗಳ ಕೆಲವು ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಮಳೆ ನೀರನ್ನು ಹೊರಹಾಕಲು ಪರದಾಡಿದ್ದಾರೆ. ಅಲ್ಲದೆ ರಾತ್ರಿಯೂ ಸಹ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಸೆಪ್ಟೆಂಬರ್ 15ರವರೆಗೂ ಭಾರೀ ಮಳೆ

ಹಾಗೆಯೇ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಚಿಕ್ಕಮಗಳೂರು, ಹಾಸನ, ಕಲಬುರಗಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರವರೆಗೂ ಭಾರೀ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+