Karnataka rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಮೂರು ದಿನಗಳ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ, ಮಾರ್ಚ್‌, 17: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ ಭೀಕರ ಬರಗಾಲದ ವಾತಾವರಣ ನಿರ್ಮಾಣವಾಗಿದ್ದು, ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿಬಿಟ್ಟಿದೆ. ಇದರ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಾರ್ಚ್‌ ಎರಡನೇ ವಾರದಿಂದ ಮಳೆರಾಯ ಕರುಣೆ ತೋರುವ ಮೂಲಕ ಕಾದಿದ್ದ ಭೂಮಿಯನ್ನು ತಂಪಾಗುವಂತೆ ಮಾಡಿದ್ದಾನೆ. ಹಾಗೆಯೇ ಇಂದು ಹಾಗೂ ಮಾರ್ಚ್‌ 22ರಿಂದ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ಎಲ್ಲೆಲ್ಲಿ ಮಳೆಯಾಗಲಿದೆ ಹಾಗೂ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಮಾರ್ಚ್​ 22ರಿಂದ 3 ದಿನಗಳ ಕಾಲ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೊಡಗು, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ.

Karnataka rain Heavy rainfall forecast for this three days in many districts of state

ಇನ್ನು ಇಂದು (ಮಾರ್ಚ್‌ 17) ಬೆಂಗಳೂರು, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಿದೆ.

ಹಾಗೆಯೇ ಮಾರ್ಚ್​ 22ರಿಂದ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತೊಂದೆಡೆ ಇಂದು (ಮಾರ್ಚ್‌ 17) ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಬಿಸಿಲಿನ ಧಗೆ ಮುಂದುವರೆಯಲಿದೆ. ಈಗಾಗಲೇ ನಿನ್ನೆ ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇನ್ನ ಇಂದು ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ನಗರದಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಲ್‌​ನಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲು ಆಗಲಿದೆ ಎನ್ನು ಮಾಹಿತಿಯನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+