Karnataka rain: ಕೆಲವೇ ಕ್ಷಣಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?

ಕರ್ನಾಟಕ, ನವೆಂಬರ್‌, 11: ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾಗಿತ್ತು. ಆದರೆ ಕಳೆದ ನಾಲ್ಕೈದು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಚುರುಕು ಪಡೆದು ಸೂರ್ಯನ ಶಾಖಕ್ಕೆ ಕಾದಿದ್ದ ಭೂಮಿಯನ್ನು ತಣ್ಣಗಾಗುವಂತೆ ಮಾಡಿದೆ. ಇನ್ನು ಇಂದು ಸಂಜೆ ವೇಳೆಗೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ ಇಂದು (ನವೆಂಬರ್ 11) ಸಂಜೆ ಅಥವಾ ರಾತ್ರಿಯಾಗುತ್ತಿದಂತೆ ಕರ್ನಾಟಕದಾದ್ಯಂತ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಅಬ್ಬರದ ಮಳೆ ಬೀಳಲಿದೆ ಎಂದು ತಿಳಿಸಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಮಾಹಿತಿಯನ್ನು ರವಾನಿಸಿದೆ.

ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ

ಇನ್ನು ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲೂ ಹಗುರದಿಂದ ಮಲೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Karnataka rain: Heavy rainfall forecast in many districts of state in few moments

ಒಳಹರಿವು ಮತ್ತೆ ಪ್ರಾರಂಭ

ಮತ್ತೊಂದೆಡೆ ಗಮನಿಸುವುದಾದರೆ ಕಳೆದ ನಾಲ್ಕೈದು ದಿನಗಳಿದಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಬತ್ತಿಹೋಗುತ್ತಿದ್ದ ನೀರಿನ ಮೂಲಗಳಿಗೆ ಜೀವಕಳೆ ಬಂದಂತಾಗಿದೆ. ಹಾಗೆಯೇ ಪ್ರಮುಖ ಜಲಾಶಯಗಳಿಗೂ ಒಳಹರಿವು ಮತ್ತೆ ಪ್ರಾರಂಭವಾಗಿದೆ. ಇದರಿಂದ ರೈತರಿಗೆ ಜಾಸ್ತಿ ಅಲ್ಲದಿದ್ದರೂ ಸ್ವಲ್ಪ ಮಟ್ಟಿಗೆ ಖುಷಿ ಆದಂತಾಗಿದೆ. ಆದರೆ ಬೆಳೆದ ಬೆಳೆಗಳೆಲ್ಲವೂ ಈಗಾಗಲೇ ಸೂರ್ಯನ ಶಾಖಕ್ಕೆ ಬೆಂದು ಹೋಗಿವೆ.

ಇನ್ನು ಇದೀಗ ಆಗುತ್ತಿರುವ ಮಳೆ ಭೂಮಿಯನ್ನು ತಂಪು ಮಾಡುತ್ತಿದ್ದು, ಇದರಿಂದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಇದೇ ಮಳೆ ಇನ್ನೂ ಒಂದು ವಾರಗಳ ಕಾಲ ಮುಂದುವರೆದರೆ, ಜಲಾಶಯಗಳಲ್ಲಿ ನೀರಿನ ಮಟ್ಟ ಸುಧಾರಿಸಿದಂತಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+