Karnataka rain: ಸೆಪ್ಟೆಂಬರ್ 15ರ ಬಳಿಕ ರಾಜ್ಯದ ಈ ಭಾಗಗಳಲ್ಲಿ ಮಳೆರಾಯನ ಆರ್ಭಟ ಜೋರೋ.. ಜೋರು
ಕರ್ನಾಟಕ, ಸೆಪ್ಟೆಂಬರ್, 14: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ರೈತರು ಬೆಳೆದ ಬೆಳೆಗಳೆಲ್ಲ ಸೊರಗಿಹೋಗಿವೆ. ಮತ್ತೊಂದೆಡೆ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಆಗಾಗ ಮಳೆಯಾಗುತ್ತಿದೆ. ಅದರಲ್ಲೂ ಮಂಗಳೂರು, ಉಡುಪಿ, ಕಾರವಾರದಲ್ಲಿ ಭಾರೀ ಮಳೆಯಾಗುತ್ತಿದ್ದರೆ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಆಗಾಗ ಸಾಧಾರಣ ಮಳೆಯಾಗುತ್ತಿದೆ. ಇನ್ನು ಸೆಪ್ಟೆಂಬರ್ 15ರ ಬಳಿಕ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ (ಸೆಪ್ಟೆಂಬರ್ 14) ಸಂಜೆ ವೇಳೆ ಭಾರೀ ಮಳೆಯಾಗಿದೆ. ನಗರದ ಎಂಜಿ ರಸ್ತೆ, ಶಿವಾಜಿ ನಗರ, ಮೆಜೆಸ್ಟಿಕ್, ಗಾಂಧಿನಗರ, ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಯಶವಂತಪುರ, ಶೇಶಾದ್ರಿಪುರಂ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಇಂದು ಕೂಡ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಸೆಪ್ಟೆಂಬರ್ 15ರ ಬಳಿಕ ಉತ್ತರ ಕನ್ನಡದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, ಮುಂಡಗೋಡು, ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ, ಬೈಂದೂರು, ಕಾಪು ಹಾಗೂ ದಕ್ಷಿಣ ಕನ್ನಡದ ಮಂಗಳೂರು, ಮೂಡುಬಿದಿರೆ, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಇನ್ನು ಮಲೆನಡು ಜಿಲ್ಲೆಗಳಾದ ಚಿಕ್ಕಗಳೂರು, ಕೊಡಗು, ಹಾಸನ ಸೇರಿದಂತೆ ಹಲವು ಜಿಲ್ಲೆಗಳ ಕೆಲವು ಕಡೆ ಮಾತ್ರ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ 15ರ ಬಳಿಕ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.












Click it and Unblock the Notifications