Karnataka Rain Update: ಮುಂದಿನ ಮೂರು ದಿನ ಸುನಾಮಿ ಮಳೆ ಮುನ್ಸೂಚನೆ: ರಾಜ್ಯದ ಈ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಣೆ
Karnataka Update: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಲೇ ಇದ್ದಾನೆ. ಹಾಗೆಯೆ ಮೇ 24ರವರೆಗೂ ಗುಡುಗು ಸಹಿತ ಧಾರಕಾರ ಮಳೆ ಹಿನ್ನೆಲೆ ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹಾಗಾದರೆ ಯಾವೆಲ್ಲ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸಲಿದ್ದಾನೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಿನ್ನೆ ರಾತ್ರಿ (ಮೇ 20) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಅಬ್ಬರಿಸಿದ ಪರಿಣಾಮ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಅಲ್ಲದೆ ಮತ್ತೊಂದೆಡೆ ಇದೀಗ ನಗರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಿಸಿಗಾಳಿ ಮಾಯವಾಗು ತಂಪು ವಾತಾವರಣ ನಿರ್ಮಾಣವಾಗಿದೆ. ಇನ್ನು ಇಂದು (ಮೇ 21) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆ ಮುಂದುವರೆಯವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಹಾಗೆಯೇ ಇನ್ನುಳಿದ ಹಲವು ಜಿಲ್ಲೆಗಳಲ್ಲಿ ಇಂದು ಇದೇ ವಾತಾವರಣ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ತನ್ನ ಆರ್ಭಟವನ್ನು ಮುಂದುವರೆಸಿದ್ದಾನೆ.
ಹಾಗೆಯೇ ಇನ್ನು ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 21 ಹಾಗೂ 22ರಂದು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲಗಳಲ್ಲಿ ಧಾರಾಕಾರ ಮಳೆ ಮುಂದುವರೆಯು ಮುನ್ಸೂಚನೆ ಹಿನ್ನೆಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೇ 23ರಂದು ದಕ್ಷಿಣ ಕನ್ನಡ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ಚಾಮರಾಜನಗರ ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂವನೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಮತ್ತು ಮೇ 24ರಂದು ಉಡುಪಿ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಇದೇ ವೇಳೆ ಹಾವೇರಿ, ವಿಜಯಪುರಮ ಧಾರವಾಡ, ಗದಗ, ದಾವಣಗೆರೆ, ವಿಜಯಪುರ ಸೇರಿದಂತೆ ಹಲವು ಜಿಲ್ಲಗಳಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿಲೋ ಮೀಟರ್ ಇರಲಿದ ಎನ್ನುವ ಮುನ್ಸೂಚನೆಯನ್ನು ನೀಡಿದೆ. ಒಟ್ಟಿನಲ್ಲಿ ಇಷ್ಟು ದಿನ ರಾಜ್ಯದ ಜನರು ಮಳೆಯಿಲ್ಲ ಅಂತಾ ಕಂಗಾಲಾಗಿದ್ದರು. ಆದರೆ ಇದೀಗ ಮಳೆರಾಯ ರೌಧ್ರಾವಾತಾರ ತಾಳಿದ್ದು, ಹಲವು ಜಿಲ್ಲೆಗಳಲ್ಲಿ ಬಿಟ್ಟು ಬಿಡದೇ ತನ್ನ ಆರ್ಭಟವನ್ನು ಮುಂದುವರೆಸಿದ್ದಾನೆ. ಇದರಿಂದ ಹಲವೆಡೆ ಜಲಮೂಲಗಳಿಗೆ ಜೀವಕಳೆ ಬಂದಂತಾಗಿದೆ.












Click it and Unblock the Notifications