Karnataka Rain: ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
Karnataka Rain: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 1ರಿಂದಲೇ ಮುಂಗಾರು ಚುರುಕು ಪಡೆದಿದೆ. ಈಗಾಗಲೇ ಸತತ ಮೂರು ದಿನಗಳಿಂದಲೂ ಹಲವೆಡೆ ಅಬ್ಬರ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇನ್ನು ಇಂದು (ಜೂನ್ 04) ಈ ಭಾಗಗಳಲ್ಲಿ ಮಾತ್ರ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹೆಚ್ಚು ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದಲೂ ಮಳೆರಾಯನ ಆರ್ಭಟ ಮುಂದುವರೆದಿದೆ. ಮೊನ್ನೆ ಸುರಿದ ರಣಭೀಕರ ಮಳೆಯಿಂದ ನಗರದ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದವು. ಇಂದು ನಿನ್ನೆ (ಜೂನ್ 03) ಬೆಳಗ್ಗೆ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಮದ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಮುಂದುವರೆದಿತ್ತು. ಇನ್ನು ಸಂಜೆಯಾಗುತ್ತಿದ್ದಂತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಲವೆಡೆ ಮಾತ್ರ ಜಿನುಗು ಮಳೆ ಬಿದ್ದಿದೆ. ಹಾಗೆಯೇ ಇಂದು (ಜೂನ್ 04) ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಈಗಾಗಲೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಗಳೂರು, ಉಡುಪಿ, ಮೈಸೂರು, ಹಾಸನ, ದಾವಣಗೆರೆ, ಬಾಗಲಕೋಟೆ ಸೇರಿದಂತೆ ಅಬ್ಬರದ ಮಳೆಯಾಗಿದೆ. ಹಾಗೆಯೇ ಇಂದು (ಜೂನ್ 04) ಕೂಡ ಬೆಂಗಳೂರು ನಗರ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೆರಿದಂತೆ ಹಲವೆಡೆ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.












Click it and Unblock the Notifications