Karnataka Rain: ಮುಂದಿನ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ?
Karnataka Rain: ಕಳೆದ ಎರಡು ವಾರದಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯ ಆರ್ಭಟ ಮುಂದುವರೆಸಿದ್ದಾನೆ. ಹಾಗೆಯೇ ಮೇ 29ರವರೆಗೂ ಹಲವು ಭಾಗಗಳಲ್ಲಿ ಗುಡುಗುಗು ಸಹಿತ ಅಬ್ಬರದ ಮಳೆ ಸುರಿಯಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ನಿನ್ನೆ (ಮೇ 22) ನಗರದ ಹಲವೆಡೆ ಬಿಸಿಲು ಮಳೆಯಾಗಿದೆ. ಇನ್ನು ಇಂದು ಬೆಳಗ್ಗೆ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಮಧ್ಯಾಹ್ಯ ಅಥವಾ ಸಂಜೆ ವೇಳಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನ ನೀಡಿದೆ. ಹಾಗೆಯೇ ಇನ್ನು ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?: ಈಗಾಗಲೇ ಕೊಡಗು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಗಳೂರು, ಹಾಸನ ಜಿಲ್ಲೆಗಳಲ್ಲಿ ಅಬ್ಬರದ ಮಳೆರಾಯ ಅಬ್ಬರಿಸುತ್ತಲೇ ಇದ್ದಾನೆ. ಇನ್ನು ಇಂದು (ಮೇ 23) ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಸುನಾಮಿತಂಹ ಮಳೆ ಬೀಳಲಿದೆ ಎಂಬ ಮುನ್ಸೂಚನೆ ಇದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಇಂದು (ಮೇ 23) ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಅಬ್ಬರದ ಮಳೆ ಸುರಿಯುವ ಸಾಧ್ಯತೆಯಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿತ್ರದುಗ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಮೇ 29ರ ರಾಜ್ಯದ ಹಲವು ಜಿಲ್ಲಗಳಲ್ಲಿ ಮಳೆ ಮುಂದುವರೆಯಲಿದೆ ಅಂತಲೂ ಮುನ್ಸೂಚನೆ ನೀಡಿದೆ.
ಬುಧವಾರ (ಮೇ 22) ಕರಾವಳಿ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳ, ಸುಳ್ಯ, ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ತಲಾ 6 ಸೆಂ.ಮೀ. ಮಳೆ ಸುರಿದಿದೆ. ಚಿಕ್ಕಮಗಳೂರಿನ ಕೊಟ್ಟಿಗೆಹಾರ 5, ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ 5, ಶಿವಮೊಗ್ಗದ ಹುಂಚದಕಟ್ಟೆಯಲ್ಲಿ 5 ಸೆಂಟಿ ಮೀಟರ್ ಮಳೆಯಾಗಲಿದೆ.
ಉತ್ತರ ಕನ್ನಡದ ಗೇರುಸೊಪ್ಪ 4, ಕೊಡಗು ಜಿಲ್ಲೆಯ ಹಾರಂಗಿ 4, ಶಿವಮೊಗ್ಗದ ತಾಳಗುಪ್ಪ 4, ಕೊಡಗು ಜಿಲ್ಲೆಯ ನಾಪೋಕ್ಲು 3, ಹಾಸನದ ಕೊಣನೂರು 3, ರಾಮನಗರ ಜಿಲ್ಲೆಯ ಮಾಗಡಿಯಲ್ಲಿ 3, ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ 3, ಉತ್ತರ ಕನ್ನಡದ ಗೋಕರ್ಣದಲ್ಲಿ 2, ಉಡುಪಿಯ ಕೊಲ್ಲೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ.












Click it and Unblock the Notifications