Karnataka rain: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ, ನವೆಂಬರ್‌, 11: ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ಹಲವೆಡೆ ಹಿಂಗಾರು ಚುರುಕು ಪಡೆದಿದೆ. ಇನ್ನು ಕೆಲವೆಡೆ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಇನ್ನು ಇಂದು (ನವೆಂಬರ್‌ 11) ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವೆಲ್ಲ ಭಾಗಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಜುಲೈ ತಿಂಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದ. ಇನ್ನು ಆಗಸ್ಟ್‌ನಲ್ಲಂತೂ ಸಂಪೂರ್ಣವಾಗಿ ಬಿಸಿಲಿನ ವಾತಾವರಣವೇ ಮುಂದುವರೆದಿದ್ದು, ಅಕ್ಟೋಬರ್ ಹಾಗೂ ನವೆಂಬರ್ ಆರಂಭದಿಂದ ಹಲವೆಡೆ ಮಳೆರಾಯ ಕರುಣೆ ತೋರಿದ್ದಾನೆ. ಹಾಗೆಯೇ ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka weather: Heavy rainfall forecast in these districts of state on november 11

ರಾಜ್ಯಧಾನಿ ಬೆಂಗಳೂರಿನಲ್ಲಿ ಆಗಾಗ ಮಳೆರಾಯ ತಂಪೆರೆಯುತ್ತಿದ್ದಾನೆ. ರಾಜ್ಯಾದ್ಯಂತ ಇಂದು ಭಾರಿ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಇನ್ನು ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+