Karnataka rain: ರಾಜ್ಯ ರಾಜಧಾನಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ, ಸೆಪ್ಟೆಂಬರ್‌, 22: ಈ ಬಾರಿ ಮಳೆಯಿಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಇನ್ನು ಸೆಪ್ಟೆಂಬರ್‌ ತಿಂಗಳು ಆರಂಭದಿಂದ ಇಲ್ಲಿಯವರೆಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಹಾಗೂ ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಾತ್ರ ಆಗಾಗ ಮಳೆ ಸುರಿಯುತ್ತಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬರೀ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯಿದೆ. ಹಾಗಾದರೆ ಯಾವ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ವರುಣ ತಂಪೆರೆಯುತ್ತಿದ್ದಾನೆ. ಬೆಳಗ್ಗೆ ಬಿಸಿಲಿನ ವಾತಾವರಣ ಇದ್ದು, ಸಂಜೆ ವೇಳೆಗೆ ನಗರದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಹಾಗೆಯೇ ಇಂದು ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ಇದೆ.

Karnataka rain: Heavy rainfall forecast in these districts of state on September 22

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಗೋಕರ್ಣ, ಕಾರವಾರ, ಅಂಕೋಲ, ಕುಮಟಾ, ತಿಪಟೂರು, ತುಮಕೂರು, ಹೊನ್ನಾವರ, ಶಿರಾಲಿ, ಬೆಳ್ತಂಗಡಿ, ಬೆಂಗಳೂರು ನಗರ, ಹುಣಸೂರು, ದಾವಣಗೆರೆ ಜಿಲ್ಲೆಯ ಹಲವೆಡೆ ನಿನ್ನೆ ಸಾಧಾರಣ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ನೈಋತ್ಯ ಮುಂಗಾರು ಕರಾವಳಿಯಲ್ಲಿ ಸಾಧಾರಣ ಇದ್ದರೆ, ಒಳನಾಡಿನಲ್ಲಿ ದುರ್ಬಲ ಆಗಿದೆ. ಇಂದು ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಒಟ್ಟಿನಲ್ಲಿ ಈಗಾಗಲೇ ಮಳೆಯಲ್ಲದೆ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದ್ದು, ಇದರಿಂದ ಅನ್ನದಾತ ಕಂಗಾಲಾಗಿದ್ದಾನೆ. ಮತ್ತೊಂದೆಡೆ ಹವಾಮಾನ ಇಲಾಖೆಯ ಪ್ರಕಾರ ಈ ತಿಂಗಳಿನಲ್ಲಿ ಮಳೆಯಾದರೆ ಮಾತ್ರ ಜಲಾಶಯಗಳಿಗೆ ಮರುಜೀವ ಬಂದಂತಾಗುತ್ತದೆ. ಇದರಿಂದ ಭೂಮಿಯೂ ತಂಪಾಗಲು ಸಾಧ್ಯವಾಗುತ್ತಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಸಿಲ ಧಗೆ ಮತ್ತಷ್ಟು ಏರಿಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುವಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+