Karnataka rain: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಕರ್ನಾಟಕ, ಅಕ್ಟೋಬರ್, 12: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಇಂದು (ಅಕ್ಟೋಬರ್ 12) ಕೂಡ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಲ್ಲಿ ಮಳೆ ಸುರಿಯುವ ಮುನ್ಸೂಚನೆ ನೀಡಿದೆ.
ನಿನ್ನೆ (ಅಕ್ಟೋಬರ್ 11) ಮದ್ದೂರು, ವಿರಾಜಪೇಟೆ, ಚನ್ನಪಟ್ಟಣ, ಶಿಗ್ಗಾಂ, ಹುಣಸೂರು, ಮಡಿಕೇರಿ, ಮಂಡ್ಯ, ಪುತ್ತೂರು, ಕೊಳ್ಳೇಗಾಲ, ನಾಪೋಕ್ಲು, ಚಿಕ್ಕಮಗಳೂರು, ಮಂಗಳೂರು, ಬೆಂಗಳೂರು, ಶ್ರೀರಂಗಪಟ್ಟಣ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಅದರಲ್ಲೂ ಉಪ್ಪಿನಂಗಡಿಯಲ್ಲಿ ಹೆಚ್ಚು ಮಳೆ ಬಿದ್ದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಾಗೆಯೇ ಇಂದು ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅಲ್ಲದೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅಬ್ಬರದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಒಟ್ಟಿನಲ್ಲಿ ಹೀಗೆ ಮಳೆರಾಯನ ಆರ್ಭಟ ಮುಂದುವರೆದರೆ ಜಲಾಶಯಗಳಿಗೂ ಜೀವಕಳೆ ಬಂದಾಂತಾಗುತ್ತದೆ. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿ ನೀರಿನ ಕೊರತೆ ಎದ್ದು ಕಾಣುತ್ತಿದೆ. ಒಂದು ವೇಳೆ ಒಂದು ವಾರ ಹೀಗೆ ಭಾರೀ ಮಳೆಯಾದರೆ ಮಾತ್ರ ಸ್ವಲ್ಪ ಮಟ್ಟಿಗೆ ನೀರಿನ ಅಭಾವ ತಗ್ಗಿದಂತಾಗುತ್ತದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅಂದರೆ ಬೇಸಿಗೆಯಲ್ಲಿ ಹನಿ ನೀರಿಗೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗುವುದಂತೂ ಗ್ಯಾರಂಟಿ.












Click it and Unblock the Notifications