Karnataka Rain: ಏಪ್ರಿಲ್ 19ರವರೆಗೂ ಭಾರೀ ಮಳೆ ಮುನ್ಸೂಚನೆ, ಯಾವ್ಯಾವ ಜಿಲ್ಲೆಗಳಿಗೆ?-ಮಾಹಿತಿ, ವಿವರ
Karnataka Rain: ರಾಜ್ಯದಲ್ಲಿ ಕಳೆದ 2023ರಿಂದ 2024ರ ಏಪ್ರಿಲ್ ಮೊದಲನೇ ವಾರದವರೆಗೂ ಮಳೆಯಿಲ್ಲದೆ ಬಹುತೇಕ ಜಿಲ್ಲಗಳಲ್ಲಿ ಜನರು ಬಿಸಿಲಿನ ಬೇಗೆಯಿಂದ ಬೇಸತ್ತು ಹೋಗಿದ್ದರು. ಆದರೆ ಏಪ್ರಿಲ್ ಮೊದಲ ವಾರದಲ್ಲಿ ಕಲವು ಜಿಲ್ಲೆಗಳಲ್ಲಿ ಮಳೆಯಾದರೆ, ಎರಡನೇ ವಾರ ಬೆಂಗಳೂರು, ಚಾಮರಾಜನಗರ ಜಿಲ್ಲೆಗಳನ್ನು ಹೊರತುಪಡಿಸಿ ಬಹುತೇಕ ಭಾಗಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ. ಹಾಗೆಯೇ ಏಪ್ರಿಲ್ 19ರವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಬೀದರ್, ಮಡಿಕೇರಿ, ಚಿಕ್ಕಮಗಳೂರು, ಮೈಸೂರು, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಈ ಪೈಕಿ ಕೆಲವು ಜಿಲ್ಲೆಗಳಲ್ಲಿ ಮಳೆರಾಯ ಅನಾಹುತಗಳನ್ನೂ ಕೂಡ ಸೃಷ್ಟಿಸಿದ್ದಾನೆ. ಇನ್ನು ಇಂದು (ಏಪ್ರಿಲ್ 15) ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ನೊರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 15ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟ ಶುರು ಮಾಡುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಬೀಳುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಇದುವರೆಗೂ ಕರುಣೆ ತೋರಿಲ್ಲ. ಆದರೆ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇನ್ನು ನಾಲ್ಕು ದಿನಗಳ ಕಾಲ ಬಿಸಿಲಿನ ವಾತಾವರಣ ಮುಂದುವರೆಯಲಿದ್ದು, ಏಪ್ರಿಲ್ 19ರ ಬಳಿಕ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಬೆಂಗಳೂರಿನಲ್ಲಿ ಇಂದು (ಏಪ್ರಿಲ್ 15) ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲು ಆಗುವ ಸಾಧ್ಯತೆಯಿದೆ. ಇನ್ನು ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ತಿಳಿಸಿದೆ.
ಏಪ್ರಿಲ್, 16, 17ರಂದು ಎಲ್ಲೆಲ್ಲಿ ಮಳೆ?: ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಏಪ್ರಿಲ್ 16ರಂದು ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಏಪ್ರಿಲ್ 17ರಂದು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಪ್ರತ್ಯೇ ಮಳೆ ಬೀಳುವ ಸಾಧ್ಯತೆಯಿದ ಎಂದು ಮುನ್ಸೂಚನೆ ನೀಡಿದೆ.
ಏಪ್ರಿಲ್ 18, 19ರಂದು ಎಲ್ಲಿ ಮಳೆ?: ಏಪ್ರಿಲ್ 18ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಏಪ್ರಿಲ್ 19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಪ್ರತ್ಯೇಕ ಸಾಧರಣ ಮಳೆಯಾಗಬಹುದು, ಇನ್ನು ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಬೆಂಗಳೂರಿನ ಕಥೆಯೇನು?: ಇನ್ನು ರಾಜ್ಯ ರಾಜಧಾನಿ ಬೆಂಗಳೂರು ವಿಚಾರಕ್ಕೆ ಬಂದರೆ ಇಲ್ಲಿ 2024 ಆರಂಭದಿಂದ ಇದುವರೆಗೂ ಕೂಡ ಒಂದು ಹನಿಯೂ ಮಳೆ ಬಿದ್ದಿಲ್ಲ. ಬರೀ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಹಾಗೂ ಇನ್ನು ಕೆಲವು ದಿನಗಳವರೆಗೂ ಇದೇ ವಾತಾವರಣ ಇರಲಿದೆ ಎಂದು ತಿಳಿಸಿದೆ. ಒಟ್ಟಿನಲ್ಲಿ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾದರೆ, ರೈತರ ಮುಖದಲ್ಲಿ ಮತ್ತಷ್ಟು ಕಳೆ ಬರುವುದಂತೂ ಗ್ಯಾರಂಟಿ. ಈಗಾಗಲೇ ಹಲವೆಡೆ ಒಂದು ಮಳೆಯಿಂದ ರೈತರು ಸ್ವಲ್ಪ ಮಟ್ಟಿಗೆ ಸಂತಸಗೊಂಡಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದರೆ ಈ ಸಂತಸ ಮತ್ತಷ್ಟು ಹೆಚ್ಚಾಗುವುದಲ್ಲಿ ಯಾವುದೇ ಅನುಮಾನವಿಲ್ಲ.












Click it and Unblock the Notifications