Karnataka rain: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ, ಎಷ್ಟು ದಿನ?, ಇಲ್ಲಿದೆ ವಿವರ
ಕರ್ನಾಟಕ, ಸೆಪ್ಟೆಂಬರ್, 12: ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಇದೀಗ ಮಳೆ ಚರುಕು ಪಡೆದಿದೆ. ಹಾಗೆಯೇ ಇಂದಿನಿಂದ ಸೆಪ್ಟೆಂಬರ್ 16ರವರೆಗೂ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 16ರವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಉತ್ತಮ ಬೀಳಲಿದೆ. ಹಾಗೆಯೇ ಉತ್ತರ ಒಳನಾಡಿನಲ್ಲೂ ಉತ್ತಮ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮಾಹಿತಿಯನ್ನು ರವಾನಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಇನ್ನು ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ ಜಿಲ್ಲೆಗಳ ಹಲವೆಡೆ ಇಂದಿನಿಂದ 5 ದಿನಗಳ ಕಾಲ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.
ಈಗಾಲೇ ನಿನ್ನೆ ಉಡುಪಿ, ಮಂಗಳೂರು, ಕೊಡಗು, ಚಿಕ್ಕಮಗಳೂರು, ಚಾಮರಾಜನರ, ಹುಬ್ಬಳ್ಳಿ, ದಾವಣಗೆರೆ ಜಿಲ್ಲೆಗಳ ಹಲವೆಡೆ ಮಳೆಯಾಗಿದ್ದು, ಇಂದು ಕೂಡ ಈ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮತ್ತೊಂದೆಡೆ ನಿನ್ನೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಕೋಡಿ ಮಠದ ಶ್ರೀಗಳು, ರಾಜ್ಯದಲ್ಲಿ ಅಮವಾಸ್ಯೆಯ ನಂತರ ಭಾರೀ ಮಳೆಯಾಗಲಿದೆ ಎನ್ನುವ ಭವಿಷ್ಯವನ್ನು ನುಡಿಸಿದ್ದಾರೆ. ಒಂದು ವೇಳೆ ಕೋಡಿಮಠದ ಶ್ರೀಗಳು ಹೇಳಿರುವಂತೆ ಮಳೆಯಾದರೆ ಕಂಗಲಾಗಿರುವ ರೈತರ ಮುಖದಲ್ಲಿ ಮಂದಹಾಸ ಮೂಡಲಿದೆ.












Click it and Unblock the Notifications