Karnataka rain: ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಭಾರೀ ಮಳೆ ಮುನ್ಸೂಚನೆ
ಕರ್ನಾಟಕ, ಸೆಪ್ಟೆಂಬರ್, 15: ಇದೀಗ ರಾಜ್ಯದ ಬಹುತೇಕ ಭಾಗಗಲ್ಲಿ ಮಳೆಯಿಲ್ಲದೆ ಬರದ ಛಾಯೆ ಆವರಿಸಿದೆ. ಇನ್ನು ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಅದರಲ್ಲೂ ನಿನ್ನೆ (ಸೆಪ್ಟೆಂಬರ್ 14) ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದರೆ, ಮಲೆನಾಡು ಜಿಲ್ಲೆಗಳ ಕಲವೆಡೆ ಸಾಧಾರಣ ಮಳೆಯಾಗಿದೆ. ಹಾಗೆಯೇ ಇಂದಿನಿಂದ ಸೆಪ್ಟೆಂಬರ್ 21ರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಗುರುವಾರ (ಸೆಪ್ಟೆಂಬರ್ 14) ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಕೆಲವೆಡೆ ಅಲ್ಲಲ್ಲಿ ಸಾಧಾರಣ ಮಳೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಗರಿಷ್ಠ ಮಳೆ ಪ್ರಮಾಣ
ಉತ್ತರ ಕನ್ನಡ -165.5ಮಿ.ಮೀ
ದಕ್ಷಿಣ ಕನ್ನಡ - 103ಮಿ.ಮೀ
ಶಿವಮೊಗ್ಗ - 56.5 ಮಿ.ಮೀ
ಉಡುಪಿ - 54.5 ಮಿ.ಮೀ
ಕೊಡಗು - 43.5 ಮಿ.ಮೀ
ಹಾಸನ - 38 ಮಿ.ಮೀ
ಚಿಕ್ಕಮಗಳೂರು - 34.5ಮಿ.ಮೀ
ಇಂದು (ಸೆಪ್ಟೆಂಬರ್ 15) ಕೂಡ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಹಾಸನ, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ಚಾಮರಾಜನಗರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಹಲವೆಡೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನಿನ್ನೆ ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾದರೆ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇತ್ತು. ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications