Karnataka rain: ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 23ರವರೆಗೂ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ

ಕರ್ನಾಟಕ, ಸೆಪ್ಟೆಂಬರ್‌, 17: ರಾಜ್ಯದಲ್ಲಿ ಆಗಸ್ಟ್‌ ತಿಂಗಳಿನಲ್ಲಿ ಕೈಕೊಟ್ಟ ಮಳೆರಾಯ ಇದೀಗ ಮತ್ತೆ ಸದ್ದು ಮಾಡುತ್ತಿದ್ದಾನೆ. ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದಯವರೆಯುತ್ತಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಆಗಾಗಾ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಹಾಗೆಯೇ ಇಂದಿನಿಂದ ಸೆಪ್ಟೆಂಬರ್‌ 23ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಇದೆ. ಹಾಗಾದರೆ ಯಾವ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 23ರವರೆಗೂ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇರುವ ಹಿನ್ನೆಲೆ ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

karnataka-rain

ನಿನ್ನೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಸಾಧಾರಣೆ ಮಳೆ ಸುರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಇಂದು ಕೂಡ ಈ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಲೋ ಮೀಟರ್‌ನಿಂದ 55 ಕಿಲೋ ಮೀಟರ್‌ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ಇನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣ ಇದ್ದು, ಇಲ್ಲಿ ಸಂಜೆ ವೇಳೆಗೆ ಮಳೆ ಸುರಿತುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+