Karnataka rain: ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 30ರವರೆಗೂ ಗುಡುಗು ಸಹಿತ ಮಳೆ ಮುನ್ಸೂಚನೆ

ಕರ್ನಾಟಕ, ಸೆಪ್ಟೆಂಬರ್‌, 21: ರಾಜ್ಯದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ವಾಡಿಕೆಗೊಂತಲೂ ಕಡಿಮೆಯಾಗಿದೆ. ಜುಲೈ ತಿಂಗಳಿನಲ್ಲಿ ಅಬ್ಬರಿಸಿದ ಮಳೆರಾಯ ಆಗಸ್ಟ್‌ ತಿಂಗಳಿನಲ್ಲಿ ಕೈಕೊಟ್ಟಿದ್ದಾನೆ. ಮತ್ತೆ ಸೆಪ್ಟೆಂಬರ್‌ ಆರಂಭದಿಂದ ಇಲ್ಲಿಯವರೆಗೂ ಮಂಗಳೂರು, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಹಲವೆಡೆ ಅಬ್ಬರದ ಮಳೆಯಾದರೆ, ಇನ್ನು ಕೆಲವು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಇನ್ನು ಇಂದಿನಿದ ಸೆಪ್ಟೆಂಬರ್‌ 30ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದಿ ಮುನ್ಸೂಚನೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಮಳೆಯಾಗುತ್ತಿದೆ. ಬೆಳಗ್ಗೆಯಲ್ಲ ಬಿಸಿಲಿನ ವಾತಾವರಣ ಇದ್ದರೆ, ಸಂಜೆ ವೇಳೆಗೆ ನಗರದಲ್ಲಿ ಮಳೆರಾಯ ಅಬ್ಬರಿಸಿದ ಬೊಬ್ಬೆರೆಯುತ್ತಿದ್ದಾನೆ. ಅದೇ ರೀತಿ ಇಂದು ಕೂಡ ನಗರದ ಹಲಬೆಡೆ ಸಂಜೆ ವೇಳೆಗೆ ಮಳೆರಾಯ ಅಬ್ಬರಿಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಇದೆ.

Karnataka rain: Heavy Rainfall forecast till September 30 in many districts of state

ಈಗಾಗಲೇ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಅಬ್ಬರದ ಮಳೆಯಾಗಿದ್ದರೆ, ಮಲೆನಾಡು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಹಾಗೆಯೇ ಇಂದು ಕೂಡ ಕರಾವಳಿ ಮತ್ತು ಒಳನಾಡಿನ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಸುರಿಯುವ ನಿರೀಕ್ಷೆ ಇದೆ. ಹಾಗೆಯೇ ಮುಂದಿನ 24 ಗಂಟೆಗಳ ಕಾಲ ಕರಾವಳಿಯ ಬಹುತೇಕ ಭಾಗಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಬೀಳುವ ಮುನ್ಸೂಚನೆ ಇದೆ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಇಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ನಗರದಲ್ಲಿ ಗಾಳಿ ವೇಗವು ಹೆಚ್ಚಿರಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಗರಿಷ್ಠ ಉಷ್ಣಾಂಶ 30 ಇದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿಲೋ ಮೀಟರ್‌ ವೇಗದಲ್ಲಿ ಇರಲಿದೆ. ಇನ್ನು ಮತ್ತೊಂದೆಡೆ ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಿಂಚು, ಗುಡುಗು ಇರುವ ಮುನ್ಸೂಚನೆ ಇದೆ. ಇನ್ನು ಉತ್ತರ ಒಳನಾಡಿನ ಅಲ್ಲಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿಲೋ ಮೀಟರ್‌ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವೆಡೆ ಬಿರುಗಾಳಿಯ ವೇಗವು ಗಂಟೆಗೆ 30-40 ಕಿಲೋ ಮೀಟರ್‌ ಬೀಸುವ ಮುನ್ಸೂಚನೆ ಇದೆ.

ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಕಾರವಾರ ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗಿದೆ. ಹಾಗೆಯೇ ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳು ಸೇರಿದಂತೆ ಇನ್ನುಳಿದ ಮಲೆನಾಡು ಜಿಲ್ಲೆಗಳಲ್ಲಿ ಆಗಾಗ ಸಾಧಾರಣ ಮಳೆಯಾಗುತ್ತಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಮಳೆಯೇ ಇಲ್ಲದೆ ಬರಿ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಮುಂದಿನ ಒಂದು ವಾರದಲ್ಲಾದರೂ ಬಿಸಿಲಿನಿಂದ ಬೆಂದಿರುವ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯಲಿದ್ದಾನೆಯಾ ಎಂದು ಕಾದುನೋಡಬೇಕಿದೆ.

ಮತ್ತೊಂದೆಡೆ ಮಳೆ ಇಲ್ಲದ ಪರಿಣಾಮ ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಕುಸಿಯುತ್ತಿದ್ದು, ಇದರಿಂದ ಅನ್ನದಾತ ಆತಂಕಕ್ಕೆ ಒಳಗಾಗಿದ್ದಾನೆ. ಇನ್ನು ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಒಂದು ವಾರದಲ್ಲಿ ಭಾರೀ ಮಳೆಯಾದರೆ ಮಾತ್ರ ರೈತರ ಆತಂಕ ದೂರವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+