Karnataka Rain: ಮುಂದಿನ ಎರಡು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ
Karnataka Rain: ಇಷ್ಟು ದಿನ ಬಿಸಿಲಿನ ಬೇಗೆಗ ಬೆಂದಿದ್ದ ರಾಜ್ಯದ ಜನರಿಗೆ ಹವಾಮಾನ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದೆ. ಬೆಂಗಳೂರು ಸೇರಿದಂತೆ ಮುಂದಿನ 2 ವಾರಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹಾವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ 46 ಡಿಗ್ರಿ ಸೆಲ್ಸಿಯಸ್‌ವರೆಗೂ ದಾಖಲಾಗಿತ್ತು. ರಾಜ್ಯ ರಾಜಧಾನಿಯಲ್ಲಿ 38 ಡಿಗ್ರಿ ಸೆಲ್ಸಿಯಸ್‌ವರೆಗೂ ಹೋಗಿದೆ. ಆದರೆ ಇದೀಗ ಇಂದು (ಮೇ 02) ಸಂಜೆಯಾಗುತ್ತಿದ್ದಂತೆ ರಾಜ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಅಬ್ಬರದ ಮಳೆ ಶುರುವಾಗಿದ್ದು, ಇಷ್ಟು ದಿನ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೊಂದೆಡೆ ರಾಜ್ಯಾದ್ಯಂತ ಮುಂದಿನ 2 ವಾರ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಭಾರೀ ಮಳೆ: ರಾಜ್ಯದ ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಕೊಡಗು, ಮೈಸೂರು, ಚಾಮರಾಜನಗರ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಎರಡು ವಾರಗಳ ಕಾಲ ಗುಡುಗು ಸಹಿತ ಅಬದಬರದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಸಾಧಾರಭ ಮಳೆ?: ಇನ್ನು ಮತ್ತೊಂದೆಡೆ ಶಿವಮೊಗ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಹಾವೇರಿ, ಉತ್ತರಕನ್ನಡ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಟ್ಟಿನಲ್ಲಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ ಎರಡು ವಾರಗಳ ಕಾಲ ಮಳೆಯಾದರೆ, ರಾಜ್ಯದಲ್ಲಿ ಜಲಮೂಲಗಳಿಗೆ ಜೀವ ಬಂದಂತಾಗಲಿದ್ದು, ಇದರಿಂದ ಜನರ ಮುಖದಲ್ಲಿ ಸ್ವಲ್ಪನಾದ್ರೂ ಮಂದಹಾಸ ಮೂಡಿದಂತಾಗಲಿದೆ.












Click it and Unblock the Notifications