Karnataka rain update: ಮುಂದಿನ 5 ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆ ಮುಂದುವರಿಕೆ
ಕರ್ನಾಟಕ, ಏಪ್ರಿಲ್, 23: ಬಿರುಬಿಸಿಲಿನಿಂದ ಬೆಂದಿದ್ದ ಹಲವೆಡೆ ಭೂಮಿಗೆ ಇದೀಗ ಮಳೆರಾಯ ತಂಪೆರೆಯುತ್ತಿದ್ದಾನೆ. ಈಗಾಗಲೇ ಹಲವೆಡೆ ಸಾಧಾರಣ ಮಳೆ ಆಗುತ್ತಿದ್ದು, ಇದರಿಂದ ಧಗೆಯು ಕೂಡ ಕಡಿಮೆ ಆಗುತ್ತಿದೆ. ಶನಿವಾರ ಸಂಜೆ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದು, ಮುಂದಿನ 5 ದಿನಗಳ ಕಾಲವೂ ರಾಜ್ಯ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ 5 ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಲ್ಲಿ ಸಾಧರಣೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಒಳನಾಡಿನ ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಬೆಳಗಾವಿ ಮತ್ತು ಗದಗದಲ್ಲಿ ಮಳೆ ಆಗಲಿದ್ದು, ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಸಿದೆ.
ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲಿನ ವಾತಾರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ವರೆಗೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಹಾಗೆಯೆ ಎಚ್ಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು ಆಗಿದೆ.

ಚಿಕ್ಕನಹಳ್ಳಿ ಎಡಬ್ಲ್ಯೂಎಸ್, ಕುಂದಗೋಳ, ದೊಡ್ಡಬಳ್ಳಾಪುರ, ಕನಬರ್ಗಿ, ಚಿಂಚೋಳಿ, ಪಾವಗಡ, ಗೌರಿಬಿದನೂರು, ಯುಗಟಿ, ಭಾಗಮಂಡಲ, ಬೆಳಗಾವಿ ವಿಮಾನ ನಿಲ್ದಾಣ, ಗುತ್ತಲ್, ರಾಣೆಬೆನ್ನೂರು, ಬಸವನ ಬಾಗೇವಾಡಿ, ಬಂಡೀಪುರ, ಹುಣಸೂರು, ಶಿವಮೊಗ್ಗ, ಬುಕ್ಕಾಪಟ್ಟಣ, ಕುಣಿಗಲ್, ಉಚ್ಚಂಗಿದುರ್ಗದಲ್ಲಿ ಮಳೆ ಆಗಿದೆ.
ಕೆಲವು ಕಡೆ ಗುಡುಗು-ಮಿಂಚು ಸಹಿತ ಮಳೆ ಆಗುವ ಸಾಧ್ಯತೆಗಳಿವೆ. ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಹಗುರ ಮಳೆಯಾಗುತ್ತಿದ್ದು, ಇದೀಗ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಏರಿಕೆ ಆಗಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಶನಿವಾರ (ಏಪ್ರಿಲ್ 22) ಕೊಡಗು, ಶಿವಮೊಗ್ಗ ಹಾಗೂ ಹಾಸನ ಭಾಗದಲ್ಲಿ ಸಾಧಾರಣ ಮಳೆ ಆಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ವ್ಯಾಪ್ತಿಯಲ್ಲಿ ಮಳೆ ಆಗಿರುವ ಬಗ್ಗೆಯೂ ವರದಿ ಆಗಿದೆ. ಇನ್ನು ಹಲವೆಡೆ ಗುಡುಗು-ಮಿಂಚು ಸಹಿತ ಮಳೆ ಆಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿದ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಬೆಳಗಾವಿ, ಕೊಪ್ಪಳ, ಗದಗ ಭಾಗದಲ್ಲಿ ಮಳೆ ಆಗಲಿದ್ದು, ಇಲ್ಲ ಮೋಡ ಮುಸುಕಿದ ವಾತಾರಣ ಕಂಡುಬಂದಿದೆ.












Click it and Unblock the Notifications