Karnataka Rain: ಕೆಲವೇ ಕ್ಷಣಗಳಲ್ಲಿ ಕರ್ನಾಟಕ ಸೇರಿ ಈ ಭಾಗಗಳಲ್ಲಿ ಗುಡುಗು ಸಹಿತ ರಣಾರ್ಭಟ ಮಳೆ: ಮುಂಗಾರು ಜೋರೋ.. ಜೋರು..

Karnataka Rain: ಈಗಾಗಲೇ ಅವಧಿಗೂ ಮುನ್ನವೇ ದೇಶದ ಹಲವೆಡೆ ಮುಂಗಾರು ಎಂಟ್ರಿ ಕೊಟ್ಟಿದೆ. ಹಾಗೆಯೇ ಇಂದು (ಜೂನ್‌ 02) ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಗಡುಗು ಸಹಿತ ಭಾರೀ ಮಳೆ ಸುರಿಯಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಕೇರಳ, ಕರ್ನಾಟಕ, ತಮಿಳುನಾಡು, ಓಡಿಶಾದ ಹಲವೆಡೆ ಮಳೆರಾಯ ರಣಾರ್ಭಟವನ್ನು ಮುಂದುವರೆಸಿದ್ದಾನೆ. ಹಾಗೆಯೇ ಇಂದು (ಜೂನ್‌ 02) ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಸಾಧಾರಣದಿಂದ ಗುಡುಗು ಸಹಿತ ಮಳೆ ಸುರಿದೆ ಎನ್ನುವ ಮುನ್ಸೂಚನೆ ನೀಡಿದೆ.

Karnataka Rain Heavy Rainfall Thunderstorm forecast in these parts

ಬೆಂಗಳೂರು ಮತ್ತು ಹೈದರಾಬಾದ್‌ ಭಾಗಗಳಲ್ಲಿ ಗುಡುಗು ಸಹಿತ ಮಳೆ ಚಟುವಟಿಕೆಗಳಿಗೆ ಹಾಟ್‌ಸ್ಪಾಟ್ ಆಗಿವೆ ಎನ್ನುವ ವಿಚಾರ ಈಗಾಗಲೇ ಗೊತ್ತಿರುವ ವಿಚಾರವಾಗಿದೆ.

ಕರ್ನಾಟಕದ ಎಲ್ಲೆಲ್ಲಿ ಮಳೆ?: ಕರ್ನಾಟಕ ರಾಜ್ಯದ ಹಲವೆಡೆ ಜೂನ್ ಶನಿವಾರ (ಜೂನ್‌ 01)ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು (ಜೂನ್ 2) ಬೆಂಗಳೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಹಾಗೆಯೇ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆಯೂ ಇದೆ.

ಇನ್ನು ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+