Karnataka Rain: ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಳೆ; ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?
ಬೆಂಗಳೂರು, ನವೆಂಬರ್ 22: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಿಂಗಾರು ಚುರುಕುಗೊಂಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ (ನವೆಂಬರ್ 22) ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ.
ನವೆಂಬರ್ 22 ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ. ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನ.23 ಹಾಗೂ 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಅಲ್ಲದೇ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications