Karnataka Rain: ರಾಜ್ಯದಲ್ಲಿ ಡಿಸೆಂಬರ್ 31 ರಿಂದ 2 ದಿನಗಳ ಕಾಲ ಮಳೆ; ಯಾವ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣದೇವ?
ಬೆಂಗಳೂರು, ಡಿಸೆಂಬರ್ 26: ಕರ್ನಾಟಕದಲ್ಲಿ ಈ ಬಾರೀ ವಾಡಿಕೆಯಂತೆ ಮಳೆಯಾಗದೇ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಹಲವು ಜಿಲ್ಲೆಗಳಲ್ಲಿ ಹಿಂಗಾರು ಕೆಲ ಜಿಲ್ಲೆಗಳಲ್ಲಿ ಚುರುಕುಗೊಂಡಿದ್ದು, ಇದೀಗ ರಾಜ್ಯದಲ್ಲಿ ಚಳಿ ವಾತಾವರಣ ಹೆಚ್ಚಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇನ್ನೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಚಳಿ ಮುಂದುವರೆದಿದೆ, ಒಣಹವೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಗರಿಷ್ಠ ತಾಪಮಾನ ಮಾಹಿತಿ ಇಲ್ಲಿದೆ.
ಹೌದು, ರಾಜ್ಯದಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇನ್ನೂ ವಿಜಯಪುರದಲ್ಲಿ 10.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರಿನಲ್ಲಿ 14 ಡಿಗ್ರಿ, ಚಿತ್ರದುರ್ಗದಲ್ಲಿ 14.6 ಡಿಗ್ರಿ, ಚಿಂತಾಮಣಿಯಲ್ಲಿ 14.7 ಡಿಗ್ರಿ ಹಾಗೂ ಬೆಂಗಳೂರು ನಗರದಲ್ಲಿ 15 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಟ ಉಷ್ಣಾಂಶ ಕಂಡು ಬಂದಿದೆ. ಮುಂದಿನ 48 ಗಂಟೆಗಳಲ್ಲಿ ಅಂದರೆ ಮಂಗಳವಾರದಂದು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟ ಮಂಜು ಕಾಣಿಸಲಿದೆ. ಭಾಗಶಃ ಮೋಡ ಕವಿದ ವಾತಾವರಣವೂ ಇರಲಿದೆ.
ಬೀದರ್‌ನಲ್ಲಿ 12 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 13.5 ಡಿಗ್ರಿ,. ಹಾವೇರಿಯಲ್ಲಿ 13.6 ಡಿಗ್ರಿ ,ಬೆಳಗಾವಿ ವಿಮಾನ ನಿಲ್ದಾಣದಲ್ಲಿ 14 ಡಿಗ್ರಿ, ಬೆಳಗಾವಿ ನಗರ ಹಾಗೂ ಕೊಪ್ಪಳದಲ್ಲಿ 15 ಡಿಗ್ರಿ ಸೆಲ್ಸಿಯಸ್, ಧಾರವಾಡದಲ್ಲಿ 11 ಡಿಗ್ರಿ, ಬಾಗಲಕೋಟೆ ಹಾಗೂ ರಾಯಚೂರಿನಲ್ಲಿ 15.8 ಡಿಗ್ರಿ ಹಾಗೂ ಕಲಬುರಗಿಯಲ್ಲಿ 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವು ದಾಖಲಾಗಿದೆ.












Click it and Unblock the Notifications