Karnataka Rain: ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?, ಇಲ್ಲಿದೆ ವಿವರ
ಕರ್ನಾಟಕ, ಸೆಪ್ಟೆಂಬರ್, 13: ರಾಜ್ಯದಲ್ಲಿ ಮಳೆ ಇದೀಗ ಚುರುಕು ಪಡದಿದೆ. ದಕ್ಷಿಣ ಕನ್ನಡ, ಕಾರವಾರ, ಮಲೆನಾಡು ಜಿಲ್ಲೆಗಳ ಕೆಲವಡೆ ಅಬ್ಬರದ ಮಳೆಯಾಗುತ್ತಿದ್ದರೆ, ಇನ್ನು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಗಾಗ ಸಾಧಾರಣ ಮಳೆಯಾಗುತ್ತಿದೆ. ಹಾಗೆಯೆ ಇಂದು ಕೂಡ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಕಾರವಾರ, ಉಡುಪಿ, ಮಂಗಳೂರು ಜಿಲ್ಲೆಗಳ ಕೆಲವಡೆ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಮಡಿಕೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಸುರಿಯುವ ಸಾಧ್ಯತೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆರಾಯ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ರಾಮನಗರ, ಹಾವೇರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಕೊಪ್ಪಳ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕಲಬುರಗಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಸೆಪ್ಟೆಂಬರ್ 18ರವರೆಗೂ ಮಳೆ
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 18ರವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಉತ್ತಮ ಬೀಳಲಿದೆ. ಹಾಗೆಯೇ ಉತ್ತರ ಒಳನಾಡಿನಲ್ಲೂ ಉತ್ತಮ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮಾಹಿತಿಯನ್ನು ರವಾನಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಇನ್ನು ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ ಜಿಲ್ಲೆಗಳ ಹಲವೆಡೆ ಇಂದಿನಿಂದ 5 ದಿನಗಳ ಕಾಲ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.
ಈಗಾಗಲೇ ಉಡುಪಿ, ಮಂಗಳೂರು, ಕೊಡಗು, ಚಿಕ್ಕಮಗಳೂರು, ಚಾಮರಾಜನರ, ಹುಬ್ಬಳ್ಳಿ, ದಾವಣಗೆರೆ ಜಿಲ್ಲೆಗಳ ಹಲವೆಡೆ ಮಳೆಯಾಗಿದ್ದು, ಇಂದು ಕೂಡ ಈ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.












Click it and Unblock the Notifications