Monsoon Rains: ಈ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭರ್ಜರಿ ಮಳೆ; ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು, ಜೂನ್ 17: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಅನಾಹುತಗಳು ಸಂಭವಿಸಿವೆ. ಉತ್ತರ ಕನ್ನಡದಲ್ಲಿ ಸುರಿದ ಭಾರಿ ಮಳೆಗೆ ಮೂವರು ಬಲಿಯಾಗಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿ ಚಟುವಟಿಯಕೆ ಆರಂಭವಾಗದೆ ರೈತರು ಬೇಸರಗೊಂಡಿದ್ದಾರೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಕರ್ನಾಟಕದಲ್ಲಿ ವರುಣಾರ್ಭಟ ಚುರುಕುಗೊಂಡಿದೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ. ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಹೆಚ್ಚು ಮಳೆಯಾಗಲಿದೆ. ಇನ್ನೂ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಮಳೆಯಾಗಲಿದೆ. ಇನ್ನೂ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮಂಕಿ, ಸಿದ್ದಾಪುರ, ಮಂಗಳೂರು, ಆಗುಂಬೆ, ಕೊಟ್ಟಿಗೆಹಾರ, ಕ್ಯಾಸಲ್ರಾಕ್, ಪಣಂಬೂರು, ಗೇರುಸೊಪ್ಪ, ಕುಂದಾಪುರ, ಉಪ್ಪಿನಂಗಡಿ, ಕದ್ರಾ, ಬಂಟವಾಳ, ಕೋಟಾ, ಹೊನ್ನಾವರ, ಕುಮಟಾ, ಧರ್ಮಸ್ಥಳ, ಮಾಣಿ, ಪುತ್ತೂರು, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇತ್ತ ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಮಳೆಗೆ ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ.
ಇನ್ನೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 8 ತಾಲೂಕು ಹಾಗೂ ಉಡುಪಿ ಜಿಲ್ಲಾದ್ಯಂತ ಶಾಲೆಗಳಿಗೆ, ಪಿಯುಸಿ, ಐಟಿಐ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಇತ್ತ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಲೆನಾಡು ಭಾಗದಲ್ಲಿ ಕಳೆದ ಒಂದು ತಿಂಗಳಿನಿಂದ ಭರ್ಜರಿ ಮಳೆಯಾಗುತ್ತಿದೆ. ಹೀಗಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 5 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಿಸಿ ಚಿಕ್ಕಮಗಳೂರು ಡಿಸಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications