Karnataka Rain Alert: ಮುಂದಿನ ಎರಡು ದಿನಗಳ ಕಾಲ ಈ 11 ಜಿಲ್ಲೆಯಲ್ಲಿ ಭರ್ಜರಿ ಮಳೆ: ಎಲ್ಲೆಲ್ಲಿ ವರುಣಾರ್ಭಟ?
ರಾಜ್ಯದ ಪಶ್ಚಿಮ ಕರಾವಳಿಯ ಉಡುಪಿ ಮತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 31ರವರೆಗೆ ಅಲ್ಲಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರೀ ಗಾಳಿ, ಸಿಡಿಲು-ಗುಡುಗು ಸಹಿತ ಸುರಿದ ಮಳೆಯಿಂದ ಅಪಾರ ಸಾಕಷ್ಟು ಹಾನಿಯಾಗಿದೆ.
ಬೆಂಗಳೂರು, ಮಾರ್ಚ್ 27: ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರು ಶುರುವಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಸಹ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕಳೆದು ಒಂದು ತಿಂಗಳಿನಿಂದ ಬಿರು ಬಿಸಿಲಿಗೆ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈಗಾಗಲೇ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ರೈತರು ಸಂತಸದಲ್ಲಿದ್ದಾರೆ. ಕರ್ನಾಟಕದಲ್ಲಿ ಕೆಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದರೂ, ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಮುಂದಿನ ಐದು ದಿನಗಳಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಅಲ್ಲದೇ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾದ್ಯತೆಯಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ, ಇನ್ನುಳಿದ ದಿನಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ ಕೆಲ ಭಾಗಗಳಲ್ಲಿ ಆನೆಕಲ್ಲು ಮಳೆಯಾಗಿತ್ತು. ಕೆಲ ಭಾಗದ ರೈತರು ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದು, ಪೂರ್ವ ಮುಂಗಾರು ಮನೆಯಿಂದ ಕೃಷಿ ಚಟುವಟಿಕೆ ಅಡ್ಡಿಯಾಗುತ್ತಿದೆ.
ರಾಜ್ಯದ ಪಶ್ಚಿಮ ಕರಾವಳಿಯ ಉಡುಪಿ ಮತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 31ರವರೆಗೆ ಅಲ್ಲಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರೀ ಗಾಳಿ, ಸಿಡಿಲು-ಗುಡುಗು ಸಹಿತ ಸುರಿದ ಮಳೆಯಿಂದ ಅಪಾರ ಸಾಕಷ್ಟು ಹಾನಿಯಾಗಿದೆ.












Click it and Unblock the Notifications