karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣದೇವ? ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ನವೆಂಬರ್‌ 23: ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹೌದು, ಕರಾವಳಿ ಜಿಲ್ಲೆಗಳಿಗೆ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.

karnataka-rain-heavy-rains-in-the-state

ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹವಾಮಾನ ಇಲಾಖೆ ಎಚ್ಚರಿಕೆಯನ್ನ ನೀಡಿದೆ. ಅಲ್ಲದೇ ಮುನ್ನೆಚ್ಚರಿಕೆಯಾಗಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ.

ಶುಕ್ರವಾರ ಕೊಡಗು, ಚಿಕ್ಕಮಗಳೂರು, ಹಾಸನ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಶನಿವಾರದಂದು ಈ 6 ಜಿಲ್ಲೆಗಳ ಜತೆಗೆ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

ಇನ್ನೂ ಕರ್ನಾಟಕದ ಹಲವು ಕಡೆಗಳಲ್ಲಿ ಗುರುವಾರವೂ ಮಳೆಯಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ. ಕೊಡಗು, ತುಮಕೂರು, ಹಾಸನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಕರಾವಳಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಶನಿವಾರದಂದು ಕರಾವಳಿಯ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಇನ್ನೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+