Heavy Rain: ಕರ್ನಾಟಕದ ಈ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ: ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ?
ಬೆಂಗಳೂರು, ಜುಲೈ 05: ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಉತ್ತಮ ಮಳೆಯಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಪ್ರಬಲವಾಗಿದ್ದು ಭಾರೀ ಮಳೆಯಾಗುತ್ತಿದೆ. ಇದೇ ಮಳೆ ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಒಟ್ಟು 5 ಜಿಲ್ಲೆಗಳಲ್ಲಿ ಜುಲೈ 5ರಿಂದ 7 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆಯಿದೆ. ಜುಲೈ 5ರಿಂದ7 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 6 ಮತ್ತು 7ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕದಲ್ಲೂ ಉತ್ತಮ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕರಾವಳಿ ಮತ್ತು ಮಲೆನಾಡಿನ ಒಟ್ಟು 5 ಜಿಲ್ಲೆಗಳಲ್ಲಿ ಜುಲೈ 5ರಿಂದ 7 ರವರೆಗೆ ಮೂರು ದಿನಗಳ ಕಾಲ ಭಾರೀ ಮಳೆ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ 05 ರಿಂದ ಜುಲೈ 07ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಅತಿ ಭಾರಿ ಮಳೆಯಾಗಲಿದ್ದು, ಆರೆಂಜ್ಅಲರ್ಟ್ ಘೋಷಣೆ ಹಾಗೂ ಜುಲೈ, 08 ಮತ್ತು 09 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಗುಜರಾತ್-ಕೇರಳ ಕರಾವಳಿ ಉದ್ದಕ್ಕೂ ಸರಾಸರಿ ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಮೇಲುಬ್ಬರದ ಪರಿಣಾಮ ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳ ಮೇಲೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಜುಲೈ 5, 6 , 7 ಮತ್ತು 8ರಂದು 4 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರೆ, 9 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 6, 7ರಂದು ಆರೆಂಜ್ ಅಲರ್ಟ್ ಮತ್ತು 5 ಮತ್ತು 9 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಹಲವು ಭಾಗಗಳಲ್ಲಿ ಈಗಾಗಲೇ ಭಾರೀ ಮಳೆ ಸುರಿಯುತ್ತಿದ್ದು, ಇನ್ನೂಮುಂದಿನ ದಿನಗಳ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ಮಳೆ ಜೋರಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಲೆ, ಪ್ರೌಢಶಾಲೆಗಳಿಗೆ ತಾಲೂಕು ಆಡಳಿತಗಳು ರಜೆ ಘೋಷಿಸಿದ್ದು, ಮುನ್ನೆಚ್ಚರಿಕೆವಹಿಸುವಂತೆ ಸೂಚಿಸಿದೆ.
ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡಗಳಲ್ಲೂ ಉತ್ತಮ ಮಳೆಯಾಗಲಿದ್ದು, ದಕ್ಷಿಣ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.












Click it and Unblock the Notifications