Karnataka Rains Alert: ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ; ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್!

ಬೆಂಗಳೂರು, ಆಗಸ್ಟ್‌ 31: ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂದಿನ 7 ದಿನಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka Rain Heavy rains trigger orange Alert across Coastal Karnataka

ಇನ್ನೂ ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ (ಸೆಪ್ಟೆಂಬರ್ 6ರವರೆ) ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯದಲ್ಲಿ ಮಳೆಯಾಗಲಿದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇದ್ದು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಈ ಮಳೆಯಿಂದ ತಾತ್ಕಾಲಿಕ ವಿದ್ಯುತ್ ಕಡಿತ, ಸಣ್ಣ ಪ್ರಮಾಣದ ಟ್ರಾಫಿಕ್ ಜಾಮ್ ಮತ್ತು ದುರ್ಬಲ ಮರದ ಕೊಂಬೆಗಳು ಮುರಿದು ಬೀಳುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ಇನ್ನೂ ಕಳೆದ ನಾಲ್ಕೈದು ದಿನಗಳಿಂದ ಆಗುಂಬೆ, ಸುಳ್ಯ, ಗೋಕರ್ಣ, ಶೃಂಗೇರಿ, ಧರ್ಮಸ್ಥಳ, ಬೆಳ್ತಂಗಡಿ, , ಶಿವಮೊಗ್ಗ, ದಾವಣಗೆರೆ ಹಾಗೂ ಮಂಗಳೂರಿನಲ್ಲಿ ಮಳೆಯಾಗಿದೆ.

ಕರಾವಳಿ ಕರ್ನಾಟಕದಲ್ಲಿ ಇಂದು ಭಾರೀ ಮಳೆ ಮತ್ತು ಬಲವಾದ ಮೇಲ್ಮೈ ಗಾಳಿ ಬೀಸುವ ನಿರೀಕ್ಷೆಯಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 2ರಂದು ಬಲವಾದ ಗಾಳಿ ಬೀಸಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರ ವರೆಗೂ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಬೆಂಗಳೂರಿನ ಹವಾಮಾನದಲ್ಲಿಯೂ ಸಣ್ಣ ಪ್ರಮಾಣದ ಮಳೆಯಾಗಲಿದೆ. ಮುಂದಿನ ಕೆಲವು ದಿನಗಳಲ್ಲಿ ಭಾಗಶಃ ಮೋಡ ಕವಿದ ಆಕಾಶದೊಂದಿಗೆ ಹಗುರವಾಗಿ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನ ಹವಾಮಾನಕ್ಕೆ ಯಾವುದೇ ಅಲರ್ಟ್ ನೀಡಲಾಗಿಲ್ಲ. ಆದರೆ ಸಂಜೆ ಗುಡುಗು ಸಹಿತ ಮಳೆ ಇರಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+