Rain Alert: ಒಂದು ವಾರ ರಾಜ್ಯದಲ್ಲಿ ಭರ್ಜರಿ ಮಳೆ
ಬಿಸಿಲಿನ ಹೊಡೆತದಿಂದ ಬಳಲಿರುವ ರಾಜ್ಯಕ್ಕೆ ಈ ವಾರ ಮಳೆ ತಂಪೆರೆಯುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ. ಮೇ 7 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
ಮೇ 7 ರಿಂದ ಶುರುವಾಗಲಿರುವ ಮಳೆ ವಾರಾಂತ್ಯದವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ. ಅದರಲ್ಲೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ.

ಬೆಂಗಳೂರು ಕೂಡ ಈ ವಾರ ಉತ್ತಮ ಮಳೆಯನ್ನು ಸ್ವೀಕರಿಸಲಿದ್ದು, ತಾಪಮಾನದಲ್ಲಿ ಭಾರಿ ಇಳಿಕೆಯಾಗಲಿದೆ. ಎರಡು ಮೂರು ದಿನ ನಗರದಲ್ಲಿ ಸತತ ಮಳೆಯಾದರೆ ತಾಪಮಾನ ಸಹಜ ಸ್ಥಿತಿಗೆ ಮರಳಲಿದೆ.
ಯಾವ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ?
ಮೇ 7 ರಂದು ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು/ಮಿಂಚು ಸಹಿತ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹೇಳಿದೆ.
ಆಲಿಕಲ್ಲು ಸಹಿತ ಮಳೆ ಎಚ್ಚರಿಕೆ
ಮೇ 8 ರಂದು ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ, ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮೇ 9ರಂದು ಕೊಡಗು, ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಮೇ 10 ರಂದು ಕ್ಷಿಣ ಕನ್ನಡ, ಉಡುಪಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಇದೆ.
ಮೇ 11ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications