Karnataka Rain: ಏಪ್ರಿಲ್ 18ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಭಾರಿ ಬಿಸಿಲು, ಬರದಿಂದ ಕಂಗೆಟ್ಟಿದ್ದ ರಾಜ್ಯದ ಜನಕ್ಕೆ ಮಳೆ ಕೃಪೆ ತೋರಿದೆ. ಮುಂಗಾರು ಶುರುವಾಗುವ ಮುನ್ನವೇ ರಾಜ್ಯದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ವಾತಾವರಣ ಸ್ವಲ್ಪ ತಂಪಾಗಿದೆ.

ಯುಗಾದಿ ಸಂಭ್ರಮದ ದಿನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದ್ದು, ಸತತವಾಗಿ ನಾಲ್ಕನೇ ದಿನವೂ ಮಳೆ ಮುಂದುವರೆದಿದೆ. ಶುಕ್ರವಾರ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗಿದೆ.

Karnataka Rain IMD Predicts Heavy Rain in Many Districts of Karnataka Until April 18th

ಶುಕ್ರವಾರ ಬೆಳಗಾವಿ 50 ಮಿ.ಮೀ, ವಿಜಯಪುರ 45 ಮಿ.ಮೀ, ಬೀದರ್ 45 ಮಿ.ಮೀ, ಚಿಕ್ಕಮಗಳೂರು 44 ಮಿ.ಮೀ, ಉತ್ತರ ಕನ್ನಡ 43 ಮಿ.ಮೀ, ಗದಗ 43 ಮಿ.ಮೀ, ಯಾದಗಿರಿ 39 ಮಿ.ಮೀ, ಕೊಪ್ಪಳ 37 ಮಿ.ಮೀ, ದಾವಣಗೆರೆ 36 ಮಿ.ಮೀ, ಕಲಬುರಗಿ 31 ಮಿ.ಮೀ, ಧಾರವಾಡ 31 ಮಿ.ಮೀ, ಶಿವಮೊಗ್ಗ 24 ಮಿ.ಮೀ, ಮೈಸೂರು 20 ಮಿ.ಮೀ, ಮತ್ತು ಕೊಡಗು ಜಿಲ್ಲೆಯಲ್ಲಿ 17 ಮಿ.ಮೀ ಮಳೆಯಾಗಿದೆ.

ಏಪ್ರಿಲ್ 18ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ ಮುನ್ಸೂಚನೆ

ಏಪ್ರಿಲ್ 13ರಂದು ಶನಿವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ.

ಏಪ್ರಿಲ್ 14 ರಂದು ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 15 ರಂದು ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 16ರಂದು ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಏಪ್ರಿಲ್ 17ರಂದು ಮಂಗಳವಾರ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಯಾದಗಿರಿ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಶಿವಮೊಗ್ಗ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ.

ಏಪ್ರಿಲ್ 17ರಂದು ಬುಧವಾರ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬೀದರ್, ವಿಜಯಪುರ, ಯಾದಗಿರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, , ಚಾಮರಾಜನಗರ, ವಿಜಯನಗರ, ತುಮಕೂರು ರಾಮನಗರ ಮತ್ತು ಶಿವಮೊಗ್ಗ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಸದ್ಯ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದು ಜನರಲ್ಲಿ ನೆಮ್ಮದಿ ತರಿಸಿದೆ, ಇದೇ ರೀತಿ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾದರೆ, ನೀರಿನ ಅಭಾವ ಮತ್ತು ಬಿಸಿಲಿನ ಆಘಾತದಿಂದ ಅಲ್ಪ ಚೇತರಿಕೆ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+