Karnataka Rains: ಕರ್ನಾಟಕದ ಈ 12 ಜಿಲ್ಲೆಗಳಲ್ಲಿ ಭರ್ಜರಿ ಮಳೆ: ಯೆಲ್ಲೋ ಅಲರ್ಟ್ ಮುಂದುವರಿಕೆ

ಬೆಂಗಳೂರು, ಅಕ್ಟೋಬರ್‌ 09: ಕರ್ನಾಟಕ ಹಿಂಗಾರು ಮಳೆ ಅಬ್ಬರ ಜೋರಾಗಿದೆ. ಮುಂಗಾರು ಮಳೆಯಿಂದಾಗಿ ರಾಜ್ಯದ ಕೆರೆ ಕಟ್ಟೆ ಹಾಗೂ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಇದೀಗ ಹಿಂಗಾರು ಮಳೆ ಅಬ್ಬರಕ್ಕೆ ಹಲವು ಜಿಲ್ಲೆಗಳು ಅಕಾಲಿಕ ಮಳೆಗೆ ತತ್ತರಿಸಿವೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಂಗಳವಾರ ಹೆಚ್ಚು ಮಳೆಯಾಗಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Rain IMD Predicts Heavy Rainfall In Several Districts Of Karnataka

ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 11 ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಅಲ್ಲದೇ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕುಂದಾಪುರ, ಎಂಎಂ ಹಿಲ್ಸ್​, ಧರ್ಮಸ್ಥಳ, ಬೆಳ್ತಂಗಡಿ, ಕೋಟ, ಸಿದ್ದಾಪುರ, ಉಡುಪಿ, ಮಂಕಿ, ಕಮ್ಮರಡಿ, ಗೋಕರ್ಣ, ಕಾರ್ಕಳ, ಕದ್ರಾ, ಗೇರುಸೊಪ್ಪ, ಕ್ಯಾಸಲ್​ರಾಕ್, ಆಗುಂಬೆ, ಚಾಮರಾಜನಗರ, ಕಾರವಾರ, ಬೇಲಿಕೇರಿ, ಶಿರಾಲಿ, ಗಂಗಾವತಿ, ಕಳಸ, ಚಿಕ್ಕಮಗಳೂರು, ತ್ಯಾಗರ್ತಿ, ಕಡೂರು, ಕೋಲಾರದಲ್ಲಿ ಮಳೆಯಾಗಿದೆ. ವಿಜಯನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಇರಲಿದೆ ಎಂದು ತಿಳಿಸಿದೆ.

ಅಕ್ಟೋಬರ್ 9 ರಿಂದ ಅಕ್ಟೋಬರ್ 17 ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ, ಹಾಗೂ ಅಕ್ಟೋಬರ್ 12 ಮತ್ತು 13 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.ಬುಧವಾರ ಹಾಗೂ ಗುರುವಾರದಂದು ಬೆಂಗಳೂರಿನ ನಗರದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಮಂಗಳವಾರವೂ ಮಳೆಯಾಗಿದ್ದು, ಅತೀ ಹೆಚ್ಚು 10 ಸೆ.ಮೀ ಮಳೆ ಸುರಿದಿದೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ, ಚಾಮರಾಜನಗರ, ದಕ್ಷಿಣ ಕನ್ನಡದ ಧರ್ಮಸ್ಥಳ, ಬೆಳ್ತಂಗಡಿ, ಮುಲ್ಕಿ, ಉಡುಪಿ ಜಿಲ್ಲೆ ಕೋಟ, ಸಿದ್ದಾಪುರ, ಉಡುಪಿ, ಕಾರ್ಕಳ, ಉತ್ತರ ಕನ್ನಡ ಜಿಲ್ಲೆಯ ಮಂಕಿ, ಗೋಕರ್ಣ, ಕದ್ರಾ, ಕ್ಯಾಸಲ್‌ರಾಕ್‌, ಗೇರುಸೊಪ್ಪ, ಸಿದ್ದಾಪುರ, ಹೊನ್ನಾವರ, ಕಿರವತ್ತಿ, ಬೇಲಿಕೇರಿ, ಶಿರಾಲಿ, ಕಾರವಾರ, ಕಿರವತ್ತಿ, ಚಿಕ್ಕಮಗಳೂರಿನ ಕಮ್ಮರಡಿ, ಕಳಸ, ಕಡೂರು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದ ಆಗುಂಬೆ, ತ್ಯಾಗರ್ತಿ, ಬೆಳಗಾವಿ ಜಿಲ್ಲೆ ಲೋಂಡಾ, ಕಲಬುರಗಿ ಜಿಲ್ಲೆಯ ಚಿಂಚೋಳಿ, ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+