Karnataka Rains: ಕರ್ನಾಟಕದಲ್ಲಿ ಮುಂದುವರೆದ ಮಳೆಯ ಆರ್ಭಟ: 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯೋ ಮಳೆ

ಬೆಂಗಳೂರು, ಮೇ 13: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ‌ಕರ್ನಾಟಕದಾದ್ಯಂತ ಇಂದು( ಸೋಮವಾರ) ಕೂಡ ಭರ್ಜರಿ ಮಳೆ ಮುಂದುವರೆಯಲಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೂ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ. ಇನ್ನುಳಿದಂತೆ ತುಮಕೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಕೋಲಾರ,ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

Karnataka Rain IMD Predicts Rain In Bengaluru Coastal North Interior Karnataka For Next 5 Days

ಇತ್ತ ಭಾನುವಾರ ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಗೆ ನುಗ್ಗಿದ ನೀರು ನುಗ್ಗಿದ್ದು, ಜಿಲ್ಲಾಧಿಕಾರಿ ಹಾಗೂ ಶಾಸಕ ಅಭಯ ಪಾಟೀಲ ವಿರುದ್ದ ಸ್ಥಳೀಯ ಮಹಿಳೆಯರು ನಾಲ್ಕು ವರ್ಷಗಳಿಂದ ಚರಂಡಿ ಸರಿಪಡಿಸಿಲ್ಲ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸರಿಯಾದ ಚರಂಡಿ ವ್ಯವಸ್ಥೆ ಸರಿಪಡಿಸದೆ ಇರುವುದಕ್ಕೆ ಮಳೆ ನೀರು ಒಳನುಗ್ಗಿದ್ದು, ಮನೆಯ ಅಡುಗೆ ಕೋಣೆಗೆ ನುಗ್ಗಿದ ನೀರು ಹಾಸಿಗೆ ನೀರು ಪಾಲಾಗಿದ್ದು, ಸತತವಾಗಿ ಒಂದು ಗಂಟೆ ಕಾಲ ಸುರಿದ ಬಾರಿ ಮಳೆಗೆ ಕಂಗಾಲಗಿದ್ದಾರೆ.

ಇಂದು ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಯಚೂರಿನಲ್ಲಿ ರಾತ್ರಿ ಇಡೀ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಕಂಗೆಟ್ಟ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಸುಮಾರು 5 ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ಇಡೀ ರಾಯಚೂರು ನಗರದಾದ್ಯಂತ ವಿದ್ಯುತ್ ವ್ಯತ್ಯಯವಾಗಿದೆ. ಇನ್ನು, ಯಾದಗಿರಿ ಜಿಲ್ಲೆಯಲ್ಲಿ ನಸುಕಿನ ಜಾವ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು ಜಿಟಿ ಜಿಟಿ ಮಳೆ ಸುರಿಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+