Karnataka Rain: ಕರ್ನಾಟಕದಲ್ಲಿ ಭರ್ಜರಿ ಮಳೆ : ಮುಂದಿನ 3 ದಿನ ವರುಣನ ಅರ್ಭಟ- ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ

ಬೆಂಗಳೂರು, ಮೇ 14: ಕರ್ನಾಟಕದಲ್ಲಿ ಮುಂಗಾರು ಆರಂಭಕ್ಕೆ ಮುನ್ನವೇ ರಾಜ್ಯದಲ್ಲಿ ಮಳೆ ಅಬ್ಬರ ಶುರುವಾಗಿದೆ. ಮೇ 21ರವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕವಾಗಿ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ,ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿಯಲ್ಲಿ ಇಂದಿನಿಂದ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ 'ಹಳದಿ ಎಚ್ಚರಿಕೆ' ನೀಡಿದೆ.

Karnataka Rain IMD Predicts Rain In Bengaluru Coastal North Interior Karnataka on May 19

ಬಿರುಗಾಳಿ, ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಇತ್ತ ರಾಜ್ಯದ ವಿವಿಧ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಸಂತಸದಲ್ಲಿದ್ದಾರೆ. ಇನ್ನೂ ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಒಂದೇ ಬಾರಿ ಹಳದಿ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ. ಮೇ17ರವರೆಗೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಇಂದು ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ಸೋಮವಾರ ಸಂಜೆ ಸೇಡಬಾಳ, ಹಾವೇರಿ, ಬೆಳಗಾವಿ, ಜೋಯಿಡಾ, ಪಣಂಬೂರು, ಮೈಸೂರು, ಚಿತ್ರದುರ್ಗ, ರಾಮನಗರ, ಚಿಂತಾಮಣಿ, ಮಾನ್ವಿ, ಸವಣೂರು, ಧರ್ಮಸ್ಥಳ, ಸಂಕೇಶ್ವರ, ಗೇರುಸೊಪ್ಪ, ಧರ್ಮಸ್ಥಳ, ಜಯಪುರ, ಭಾಗಮಂಡಲ, ದಾವಣಗೆರೆ, ಸೋಮವಾರಪೇಟೆ, ಬೇಲೂರು, ನಾಯಕನಹಟ್ಟಿಯಲ್ಲಿ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+