Karnataka Rain: ಬೆಂಗಳೂರಿಗರೇ ಎಚ್ಚರ! ಎರಡು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?
ಬೆಂಗಳೂರು, ಮೇ 16: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿಯುತ್ತಿದ್ದು, ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವನಿರೀಕ್ಷೆ ಇದೆ.ಬೆಂಗಳೂರಿನಲ್ಲಿ ಮೇ 19ರಿಂದ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹೌದು, ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಐದು ದಿನ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

ಬೆಳಗಾವಿ, ಧಾರವಾಡ ಸೇರಿ ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಗುಡುಗು ಮಿಂಚು ಗಾಳಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಳೆ ಮುನ್ಸೂಚನೆ ವರದಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಇನ್ನೂ ಬುಧವಾರ ಶಿವಮೊಗ್ಗ, ಚಿಕ್ಕಮಗಳೂರು, ಗಂಗಾವತಿ, ಬಾಳೆಹೊನ್ನೂರು, ಬನವಾಸಿ, ಬೈಲಹೊಂಗಲ, ಕೂಡಲಸಂಗಮ, ನರಗುಂದ, ಕಮ್ಮರಡಿ, ಕೊಪ್ಪ, ತಿಪಟೂರಿನಲ್ಲಿ ಮಳೆಯಾಗಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು,ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ ಹಲವೆಡೆ ಇಂದು ಗುಡುಗು ಮಿಂಚು ಗಾಳಿ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications