Kanrataka rain: ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೆ ಮೇ 11ರವೆರೆಗೆ ಮಳೆ, ಕರಾವಳಿ-ಉತ್ತರ ಒಳನಾಡಿನ ಹವಾಮಾನ ವರದಿ ಹೀಗಿದೆ

ಬೆಂಗಳೂರು, ಮೇ 06: ಕರ್ನಾಟಕದ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳು ಇವೆ. ಮುಂದಿನ ಐದು ದಿನ ಮೇ 11ರವರೆಗೆ ಗುಡುಗು ಸಹಿತ ವ್ಯಾಪಕ ಮಳೆ ಆವರಿಸಲಿದೆ. ರಾಜ್ಯಕ್ಕೆ ಬಂಗಾಳಕೊಲ್ಲಿಯ ಮೋಚಾ ಸೈಕ್ಲೋನ್ ಪ್ರಭಾವ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಕೆಲವು ದಿನಗಳಿಂದ ಕರಾವಳಿ ಮತ್ತು ಉತ್ತರ ಕರ್ನಾಟಕದ ಭಾಗದಲ್ಲಿ ಅದರಲ್ಲೂ ಮಲೆನಾಡು ಒಳಗೊಂಡದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಇದು ಹೀಗೆ ಇನ್ನೊಂದು ವಾರ ಮುಂದುವರಿಯುವ ಸಾಧ್ಯತೆ ಇದೆ. ಈ ವೇಳೆ ದಕ್ಷಿಣ ಒಳನಾಡಿನ ಎಲ್ಲ ಪ್ರದೇಶಗಳಲ್ಲಿ ಮಳೆ ಅಬ್ಬರು ಕಂಡು ಬರಲಿದೆ.

Karnataka Rain: IMD Predicts Thunderstrom With Heavy Rain For Karnataka Till May 11th

ಈ ಪೈಕಿ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಈ ನಾಲ್ಕು ಜಿಲ್ಲೆಗಳಿಗೆ ಭಾರೀ ಮಳೆ ಪ್ರಯುಕ್ತ ಮೇ 9 ರಂದು ಹಳದಿ ಎಚ್ಚರಿಕೆ ಕೊಡಲಾಗಿದೆ. ಉಳಿದ ನಾಲ್ಕು ದಿನವೂ ಸಹ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ಹಾಸನ, ದಾವಣಗೆರೆ, ಚಿತ್ರದುರ್ಗ,ವಿಜಯನಗರ, ಶಿವಮೊಗ್ಗ, ತುಮಕೂರುಗಳಲ್ಲಿ ಆಗಾಗ ವ್ಯಾಪಕವಾಗಿ ಮಳೆ ಬೀಳುವ ಸೂಚನೆ ಇದೆ ಎನ್ನಲಾಗಿದೆ.

ಈ ಐದು ದಿನದಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ್ಳ, ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ದಿನ ಬಿಟ್ಟು ದಿನ ಅಲ್ಲಲ್ಲಿ ಜೋರು ಮಳೆ ಕಂಡು ಬರುವ ನಿರೀಕ್ಷೆ ಇದೆ. ಇದರ ಹೊರತಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 11ರವರೆಗಿನ ಅವಧಿಯಲ್ಲಿ ಮೊದಲ ಎರಡು ದಿನ ಮೇ 8ರವರೆಗೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ನಂತರದ ಮೂರು ದಿನ ಇಲ್ಲಿ ಮಳೆ ಮತ್ತಷ್ಟು ಚುರುಕಾಗಲಿದ್ದು, ಉತ್ತಮ ಮಳೆ ಆಗಮನವಾಗಲಿದೆ. ಇನ್ನೂ ಕರಾವಳಿ ಭಾಗದಲ್ಲಿ ಮೀನುಗಾರರು, ಸಣ್ಣ ಹಡಗುಗಳು, ದೋಣಿಗಳ ಮೂಲಕ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Karnataka Rain: IMD Predicts Thunderstrom With Heavy Rain For Karnataka Till May 11th

ಬೆಂಗಳೂರು: ಬೊಮ್ಮನಹಳ್ಳಿಗೆ ವ್ಯಾಪಕ ಮಳೆ

ಬೆಂಗಳೂರಿನಲ್ಲಿ ಸಹ ಮುಂದಿನ ಐದು ದಿನ ಹಗುರದಿಂದ ಸಾಧಾರಣವಾಗಿ ಅಲ್ಲಲ್ಲಿ ಮಳೆಯಾಗಲಿದೆ. ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿ ಭಾಗದಲ್ಲಿ ಅತ್ಯಧಿಕ ಮಳೆಯ ನಿರೀಕ್ಷೆ ಇದೆ. ಇದರ ಹೊರತು ಬೇರೆ ಬಡಾವಣೆಗಳಲ್ಲಿ ಮಳೆ ಸಾಮಾನ್ಯವಾಗಿರಲಿದೆ. ಕಳೆದ ಕೆಲವು ದಿನಗಳಿಂದ ಕಂಡು ಬರುತ್ತಿರುವ ಮೋಡ ಕವಿದ ವಾತಾವರಣವೇ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿದೆ.

ಕಳೆದ 24ಗಂಟೆಯಲ್ಲಿ ಕರ್ನಾಟಕದ ದಕ್ಷಿಣ ಒಳಾಡಿನ ಕೋಲಾರ ಜಿಲ್ಲೆಯಲ್ಲಿ ಅಧಿಕ ಮಳೆ ಬಿದ್ದ ಬಗ್ಗೆ ವರದಿಯಾಗಿದೆ. ಜಿಲ್ಲೆಯ ಬಂಗಾರಪೇಟೆ ಮತ್ತು ಗತಿಕಮಾಡೆನಹಳ್ಳಿಯಲ್ಲಿ ಒಂದೇ ದಿನ 108 mm ಮಳೆ ದಾಖಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+