Karnataka Rain: ಇಂದಿನಿಂದ ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು,ಡಿಸೆಂಬರ್‌ 24: ಕರ್ನಾಟಕದ ವಿವಿಧೆಡೆ ಇಂದಿನಿಂದ ಡಿಸೆಂಬರ್‌ 28ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಜೊತೆಗೆ ಚಳಿ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 30 ವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಮುಂದಿನ 5 ದಿನಗಳ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Rain in some regions others between December 24-30

ಡಿಸೆಂಬರ್ 25 ರಂದು, ರಾಜ್ಯದಾದ್ಯಂತ ಆಯ್ದ ಪ್ರದೇಶಗಳಲ್ಲಿ ಲಘು ಮಳೆಯೊಂದಿಗೆ ಇದೇ ರೀತಿಯ ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 26 ರಂದು, ದಕ್ಷಿಣ ಒಳನಾಡಿನ ಜಿಲ್ಲೆಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಲಘು ಮಳೆ ಬೀಳಬಹುದು ಹಾಗೂ ಡಿಸೆಂಬರ್ 27 ರ ವೇಳೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹೆಚ್ಚುವರಿಯಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡದಲ್ಲೂ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 28 ರಿಂದ 29 ರವರೆಗೆ ಒಳನಾಡಿನ ಕೆಲವು ಸ್ಥಳಗಳಲ್ಲಿ ಮೋಡಕವಿದ ವಾತಾವರಣವಿರಲಿದೆ. ಡಿಸೆಂಬರ್ 25 ರ ಬೆಳಗಿನವರೆಗಿನ ಬೆಂಗಳೂರಿನ ಹವಾಮಾನ ಮುನ್ಸೂಚನೆಯು ಭಾಗಶಃ ಮೋಡ ಕವಿದ ವಾತಾವರಣ ವಿರಲಿದೆ ಮತ್ತು ಬೆಳಗಿನ ಸಮಯದಲ್ಲಿ ಕೆಲವು ಪ್ರದೇಶಗಳಲ್ಲಿ ದಟ್ಟವಾದ ಮಂಜು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮಳೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣದಂತಹ ರಾಜ್ಯಗಳಲ್ಲಿ ಏಳು ದಿನಗಳವರೆಗೆ ಮಳೆಯಾಗಲಿದ್ದು, ಜೊತೆಗೆ ದಟ್ಟವಾದ ಮಂಜು ಜೊತೆಗೆ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ.

ಬಂಗಾಳಕೊಲ್ಲಿಯ ಪಶ್ಚಿಮ-ಮಧ್ಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾಗುತ್ತಿದೆ. ಡಿಸೆಂಬರ್ 25 ರ ವೇಳೆಗೆ ಇದು ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯನ್ನು ತಲುಪುವ ನಿರೀಕ್ಷೆಯಿದ್ದು, ಈ ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+