Karnataka Rains: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು, ಆಗಸ್ಟ್‌ 20: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಆರಂಭದಿಂದಲೂ ಹೆಚ್ಚಾಗಿದ್ದು, ನಿರಂತರವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಇದೀಗ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕಾಗುತ್ತಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗುತ್ತಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಡುವು ಪಡೆದಿದ್ದ ಮಳೆಯ ಅಬ್ಬರ ಮತ್ತೆ ಶುರುವಾಗುತ್ತಿದೆ. ಅಲ್ಲದೇ ಹಲವು ಜಿಲ್ಲೆಗಳಿಗೆ, ಯೆಲ್ಲೋ, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rain It will rain heavily for the next 24 hours

ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ, ಉತ್ತರ ಒಳನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಆಗಸ್ಟ್ 24 ರಂದು ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 21 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಆಗಸ್ಟ್ 20 ರವರೆಗೆ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ಇನ್ನೂ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಭಾಗದ ಬಹುತೇಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆ ವೇಳೆಗೆ ಮಳೆಯಾಗುತ್ತಿದೆ. ಇಂದು ಸಹ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಕವಡಿಮಟ್ಟಿ, ಸೋಮವಾರಪೇಟೆ, ಶೋರಾಪುರ, ಮುದ್ದೇಬಿಹಾಳ, ಗುಂಡ್ಲುಪೇಟೆ, ಲೋಕಾಪುರ, ತ್ಯಾಗರ್ತಿ, ಗುಂಡ್ಲುಪೇಟೆ, ಅಜ್ಜಂಪುರ, ಆಗುಂಬೆ, ಶ್ರವಣಬೆಳಗೊಳ, ಕಮ್ಮರಡಿ, ಹುಣಸಗಿ, ಮುನಿರಾಬಾದ್, ರಬಕವಿ, ಯಡವಾಡ, ಶಿವಮೊಗ್ಗ, ಕುಶಾಲನಗರ, ಭಾಲ್ಕಿಯಲ್ಲಿ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+