Karnataka Rain: ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ

ಬೆಂಗಳೂರು, ಮೇ 13: ಎರಡು ವಾರಗಳಿಂದ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಮಳೆರಾಯನ ಆಗಮನವಾಗಿದೆ. ಮುಂದಿನ 7 ದಿನಗಳ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದಿನಿಂದ ಮೇ 16 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದ ದಿನಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಇನ್ನೂ ಮುಂಗಾರು ಕರ್ನಾಟಕಕ್ಕೆ ಐದು ದಿನ ಮುಮಚಿತವಾಗಿಯೇ ಆಗಮಿಸಲಿದೆ ಎಂದು ಐಎಂಡಿ ಹೇಳಿದೆ. ಇಂದು ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ನಿನ್ನೆ (ಸೋಮವಾರ)ರಾತ್ರಿ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ರಾಜ್ಯದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Karnataka Rain Karnataka Rains 21 districts of Karnataka till May 17

ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು, ಆಲಮಟ್ಟಿ, ಮಂಗಳೂರು, ಹುಣಸಗಿ, ಮುಲ್ಕಿ, ಗೌರಿಬಿದನೂರಿನಲ್ಲಿ ಮಳೆಯಾಗಿದೆ.

ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ವರುಣ, ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೆ ಎಂಟ್ರಿ ಕೊಟ್ಟಿದ್ದಾನೆ. ಸೋಮವಾರ ಸಂಜೆಯಿಂದಲೇ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿತ್ತು. ಇಂದು ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಜೋರಿ ಗಾಳಿ ಸಹಿತ ಮಳೆಯಾಗುತ್ತಿದೆ. ಇದರಿಂದ ಕಚೇರಿಗಳಿಂದ ಮನೆಗೆ ಉದ್ಯೋಗಸ್ಥರು ಮತ್ತು ಬೀದಿ ಬದಿ ವ್ಯಾಪಾರಸ್ಥರು ಪರದಾಡುವಂತಾಯಿತು.

ಇನ್ನೂ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಶಾಂತಿನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋರಾಗಿ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್​ ಜಾಮ್​ನಿಂದ ವಾಹನ ಸವಾರರು ಪರದಾಡುವಂತಾಯಿತು. ಅಲ್ಲದೇ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆಯಾಗಲಿದ್ದು, ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಸಿಲಿಕಾನ್ ಸಿಟಿಯಲ್ಲಿ ನಿನ್ನೆಯ ಮಳೆರಾಯ ತಂಪೆರೆದಿದ್ದ. ಇಂದು ಸಹ ನಗರದ ಹಲವಾರು ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರಿನ ಟೌನ್ ಹಾಲ್, ಲಾಲ್ ಬಾಗ್, ಮಲ್ಲೇಶ್ವರಂ, ಯಶವಂತಪುರ ಮೈಸೂರು ಬ್ಯಾಂಕ್‌ ಸರ್ಕಲ್, ಮೆಜೆಸ್ಟಿಕ್‌, ಕೆ.ಆರ್‌. ಮಾರ್ಕೆಟ್, ವಸಂತನಗರ, ಕಬ್ಬನ್ ಪಾರ್ಕ್ ರಸ್ತೆ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಇಂದಿನಿಂದ(ಮೇ 13) 19ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಮೇ 15ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+