Karnataka Rain: ಜೂನ್ 11ರಂದು ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಬಿರುಗಾಳಿ, ಅಧಿಕ ಮಳೆ ಸಾಧ್ಯತೆ

ಬೆಂಗಳೂರು, ಜೂನ್‌ 07: ಈ ವರ್ಷದ ಮುಂಗಾರು ತಡವಾಗಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 11 ರಂದು ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜಿಲ್ಲಾ ಬಳ್ಳಾರಿ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ತುಮಕೂರಿನಲ್ಲಿ ಅಧಿಕ ಮಳೆಯಾಗಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಯಲ್ಲಿಯೂ ಮಳೆಯಾಗಲಿದೆ.

Karnataka Rain

ಇನ್ನೂ ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35-45 ಕಿ.ಮೀಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಂಗಳೂರಿನಲ್ಲಿ ಮೋಡಕವಿದ ವಾತಾವರವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 40.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದಲ್ಲಿ ಜೂನ್ 11 ರವರೆಗೆ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬರಲಿದೆ. ಜೂನ್ 10 ಮತ್ತು 12ರಂದು ಬಳ್ಳಾರಿ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆ ಅಬ್ಬರಿಸಲಿದೆ. ಹೀಗಾಗಿ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ಕೊಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+