Karnataka Rains: ಬೆಂಗಳೂರು, ಉತ್ತರ ಕರ್ನಾಟಕ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ!

ಬೆಂಗಳೂರು,ಮೇ 08: ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.

ಇನ್ನೂ ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Karnataka Rain: Karnatakas Many Districts Will Witness Heavy Rainfall Till May 12

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ.

ಹವಾಮಾನ ಇಲಾಲೆ ನೀಡಿರುವ ಮಾಹಿತಿ ಹಿನ್ನೆಲೆ ರಾಮನಗರ, ಮಾಲೂರು, ಹೊಸಕೋಟೆ, ಕನಕಪುರ, ರಾಯಚೂರು, ಸರಗೂರು, ಪರಶುರಾಂಪುರ, ಕೃಷ್ಣರಾಜಸಾಗರ, ಸೈದಾಪುರ, ಹಾಸನ, ಕುಣಿಗಲ್, ಕೆಐಎಎಲ್​, ಖಜೂರಿ, ತಿರುಮಲ, ಚಾಮರಾಜನಗರ, ಕೃಷ್ಣರಾಜಪೇಟೆ, ಬೀದರ್, ಗೋಣಿಕೊಪ್ಪಲು, ಹರದನಹಳ್ಳಿ, ಶ್ರೀರಂಗಪಟ್ಟಣ, ಚಿಕ್ಕನಹಳ್ಳಿ, ಬೆಳ್ಳೂರು, ಮೈಸೂರಿನಲ್ಲಿ ಮಳೆಯಾಗಲಿದೆ.

Karnataka Rain: Karnatakas Many Districts Will Witness Heavy Rainfall Till May 12

ಇನ್ನೂ ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ತಜ್ಞರ ಪ್ರಕಾರ, ಆಗ್ನೇಯ ಬಂಗಾಳದಲ್ಲಿ ಶೀಘ್ರದಲ್ಲೇ ಚಂಡಮಾರುತದ ಪರಿಚಲನೆ ರಚನೆಯಾಗುವ ಸಾಧ್ಯತೆ ಇದೆ. ತಾಪಮಾನ ಏರಿಕೆಯ ಹೊರತಾಗಿಯೂ, ಮುಂದಿನ ವಾರದವರೆಗೆ ಈ ರಾಜ್ಯಗಳಲ್ಲಿ ಶಾಖದ ಅಲೆಯು ಕಡಿಮೆ ಇರಲಿದೆ. ಮೇ ತಿಂಗಳ ಎರಡನೇ ವಾರದಿಂದ ಹವಾಮಾನವು ಸಂಪೂರ್ಣವಾಗಿ ಬದಲಾಗುತ್ತದೆ. ಜನರು ಆಗಾಗ ಬಿಸಿಲಿನ ತಾಪವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+