Rain Alert: ಯುಗಾದಿಯಂದು ರಾಜ್ಯದ ಹಲವೆಡೆ ಭರ್ಜರಿ ಮಳೆ; ಈ ಜಿಲ್ಲೆಗಳಲ್ಲಿ ಮುಂದುವರೆಯಲಿದೆ ಮಳೆ- ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್‌ 10: ಬಿಸಿಲಿನ ತಾಪಕ್ಕೆ ಬೆಂಡಾದ ಜನರಿಗೆ ಯುಗಾದಿ ಹಬ್ಬದಂದು ಮಳೆರಾಯನ ಆಗಮನವಾಗಿದ್ದು, ಕೊಂಚ ತಂಪೆರೆದಿದ್ದಾನೆ. ಏಪ್ರಿಲ್‌ 09 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬರಗಾಲದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಿಂದಾಗಿ ಜನರಿಗೆ ಖುಷಿ ತಂದಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹೌದು, ರಣ, ರಣ ಬಿಸಿಲಿನ ತಾಪಕ್ಕೆ ಬೆಂದಿದ್ದ ಕರುನಾಡ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಕೊಪ್ಪಳ, ವಿಜಯನಗರ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಮಳೆಯಾಗಿದ್ದು, ಯುಗಾದಿ ಹಬ್ಬದಂದು ಮೊದಲ ಮಳೆಯಿಂದಾಗಿ ಕರ್ನಾಟಕದ ಜನತೆ ಕುಣಿದು ಕುಪ್ಪಳಿಸಿದ್ದಾರೆ. ಇಂದಿನಿಂದ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Rain Karnataka Will Witness Heavy Rainfall Till Next 5 Days

ಉತ್ತರ ಒಳನಾಡಿನ ಬಹುತೇಕ ಕಡೆ ಏಪ್ರಿಲ್​ 15ರವರೆಗೆ ಮಳೆಯಾಗಲಿದ್ದು, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಏಪ್ರಿಲ್​ 12ರಂದು ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೂ ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಬೆಮಗಳೂರು ನಗರ, ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದ್ದು, ಕೆಲವು ಭಾಗದಲ್ಲೂ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+