Karnataka Rains: ಮತ್ತೆ ಮಳೆ ಅಬ್ಬರ; ಬೆಂಗಳೂರು ಸೇರಿದಂತೆ ಇಂದಿನಿಂದ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು, ಅಕ್ಟೋಬರ್‌ 04: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 6 ಮತ್ತು 7 ರಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದ್ದು, ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain Karnataka s 17 districts will receive heavy rainfall this week

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕಳೆದ ವರ್ಷಿಕ್ಕಿಂತ ಈ ವರ್ಷ ಮುಂಗಾರು ಆರಂಭದಿಂದಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ರಾಜ್ಯದಲ್ಲಿ ಉತ್ತಮ ಮಳೆಯಿಂದಾಗಿ ರೈತರು ಸಂತಸದಲ್ಲಿದ್ದಾರೆ. ಅಲ್ಲದೇ ವರುಣಾನ ಅಬ್ಬರದಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿವೆ. ಇನ್ನೂ ದೀಪಾವಳಿ ಹತ್ತಿರ ಬಂದರೂ ಸಹ ರಾಜ್ಯದಲ್ಲಿ ಮಳೆ ಮಾತ್ರ ಕಡಿಮೆಯಾಗುವ ನಿರೀಕ್ಷೆ ಮಾತ್ರ ಕಾಣುತ್ತಿಲ್ಲ. ವಾರಗಟ್ಟಲೆ ಬಿಡುವು ಪಡೆದಿದ್ದ ಮಳೆ ಮತ್ತೆ ಗುಡುಗು, ಸಿಡಿಲನೊಂದಿಗೆ ಅಬ್ಬರ ಶುರು ಮಾಡಿದೆ.

ಇಂದಿನಿಂದ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಗುಬ್ಬಿ, ರಾಮನಗರ, ಮಧುಗಿರಿ, ಕೊಳ್ಳೇಗಾಲ, ಬಸವನಬಾಗೇವಾಡಿ, ಇಂಡಿ, ಕುಕನೂರು, ಕೃಷ್ಣರಾಜಸಾಗರ, ಗೌರಿಬಿದನೂರು, ಕೋಲಾರ, ಬೈಲಹೊಂಗಲ, ಮುದಗಲ್, ನೆಲೋಗಿ, ಚಾಮರಾಜನಗರ, ರಾಯಲ್ಪಾಡು, ಎಂಎಂ ಹಿಲ್ಸ್​, ಖಜೂರಿ, ಶಹಾಪುರ, ಸಿಂದಗಿ, ಕೆಂಭಾವಿ, ಸಿರಾ, ಮದ್ದೂರು, ವೈಎನ್ ಹೊಸಕೋಟೆ, ನಂಜನಗೂಡು, ದಾವಣಗೆರೆ, ಶಿವಮೊಗ್ಗದಲ್ಲೂ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+