Karnataka Rains: ಮತ್ತೆ ವರುಣನ ಆರ್ಭಟ; ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಬೆಂಗಳೂರು, ಅಕ್ಟೋಬರ್ 07: ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 9 ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.
ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡಿಗೆ ಸೀಮಿತವಾಗಿದ್ದ ಮಳೆ ಅಬ್ಬರ ಇದೀಗ ಒಳನಾಡು ಜಿಲ್ಲೆಗಳಿಗೂ ವಿಸ್ತರಣೆಯಾಗಿದೆ. ರಾಜ್ಯದಲ್ಲಿ ಮಳೆಯ ವಾತಾವರಣ ಕಂಡು ಬರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ವಿಜಯನಗರ, ಕೋಲಾರದಲ್ಲಿ ಸಾಧಾರಣ ಮಳೆಯಾಗಲಿದೆ. ನಾಪೋಕ್ಲು, ಬಂಡೀಪುರ, ಕಾರ್ಕಳ, ನರಗುಂದ, ರಾಮನಗರ, ಮಸ್ಕಿ, ಕನಕಪುರ, ಮಾಗಡಿ, ಎಚ್ಡಿ ಕೋಟೆ, ಮುಂಡಗೋಡು, ಕುಮಟಾ, ಲಕ್ಷ್ಮೇಶ್ವರ, ಕೊಟ್ಟಿಗೆಹಾರ, ಹಾಸನ, ಹೊಸಕೋಟೆ, ಶ್ರವಣಬೆಳಗೊಳ, ಕೋಲಾರ, ತ್ಯಾಗರ್ತಿ, ಪೊನ್ನಂಪೇಟೆ, ಹೊನ್ನಾಳಿ, ಮೈಸೂರಿನಲ್ಲಿ ಮಳೆಯಾಗಿದೆ.
ಉತ್ತರ ಕರ್ನಾಟಕದ ಭಾಗದಲ್ಲಿ ಮಳೆ ಚುರುಕಾಗಿದ್ದು, ಧಾರಾಕಾರ ಮಳೆ ಸುರಿದು ಜನ ತತ್ತರಿಸುವಂತೆ ಮಾಡಿದೆ. ಉತ್ತರ ಕರ್ನಾಟಕದಲ್ಲಿ ಮಾತ್ರವಲ್ಲದೇ ದಕ್ಷಿಣ ಕರ್ನಾಟಕ ಭಾಗದಲ್ಲಿಯೂ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ಐದು ದಿನಗಳಿಂದ ಒಂದು ವಾರದವರೆಗೆ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ಐದು ದಿನಗಳಿಂದ ಒಂದು ವಾರದವರೆಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ನಿರಂತರ ಮಳೆ ಸುರಿಯುವುದರಿಂದ ಮತ್ತೆ ಕೆರೆ, ಕಟ್ಟೆ, ಹಳ್ಳ ಕೊಳ್ಳಗಳು ತುಂಬಿ ಹರಿಯುವ ಸಾಧ್ಯತೆ ಇದೆ.












Click it and Unblock the Notifications